ಜಿಲ್ಲೆಗಳು

ಮಗುವಿನ ಚಿಕಿತ್ಸೆಗೆ ನೆರವಾಗಲು ಮನವಿ

ಮಂಡ್ಯ: ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿಕೊಂಡಿದ್ದಾರೆ.

ಮದ್ದೂರು ತಾಲ್ಲೂಕು ಬಿದರಕೋಟೆಯ ಪ್ರಸನ್ನಕುಮಾರ್ ಹಾಗೂ ರಮ್ಯಾ ಅವರ 5 ವರ್ಷದ ಗಂಡು ಮಗು ಅಚ್ಚುತ್‌ಕುಮಾರ್ ಕಳೆದ ಒಂದೂವರೆ ವರ್ಷದಿಂದ ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈಗಾಗಲೇ ಲಕ್ಷಾಂತರ ರೂ. ಚಿಕಿತ್ಸೆಗಾಗಿ ಖರ್ಚಾಗಿದೆ. ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪೋಷಕರು ಮನವಿ ಮಾಡಿದರು.

ಅಚ್ಚುತ್ ಕುಮಾರ್ ಮೂರೂವರೆ ವರ್ಷದವನಿದ್ದಾಗ ಜ್ವರ ಬಂದಿತ್ತು. ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಅನಿಮಿಯಾ ಎಂದು ಹೇಳಿದ್ದರು. ನಂತರದ ದಿನಗಳಲ್ಲಿ ಮಗುವಿನ ಆರೋಗ್ಯ ಕ್ಷೀಣಿಸುತ್ತಾ ಬಂತು. ನಾವು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೆವು. ಆದರೂ ಗುಣಮುಖವಾಗಲಿಲ್ಲ. ಬಳಿಕ ನಾರಾಯಣ ಆಸ್ಪತ್ರೆಯಲ್ಲಿ ತೋರಿಸಿದಾಗ ಮಗು ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದೆ ಎಂದು ತಿಳಿದುಬಂತು. ಇದರಿಂದ ಗಾಬರಿಗೊಂಡ ನಾವು ಎಲ್ಲ ರೀತಿಯ ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಗುಣವಾಗಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಶಸ್ತ್ರ ಚಿಕಿತ್ಸೆ ಮಾಡಿಸಲು ಸುಮಾರು 20 ಲಕ್ಷ ಹಾಗೂ ಒಂದು ವರ್ಷದ ಚಿಕಿತ್ಸೆ 10 ಲಕ್ಷ, ಒಟ್ಟಾರೆ 30 ಲಕ್ಷ ರೂ.ಗಳ ವೆಚ್ಚ ತಗುಲುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ನಮ್ಮಲ್ಲಿ ಇಲ್ಲ. ನಾವು ಇರುವ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ದಯವಿಟ್ಟು ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಕೋರಿದರು.

ಮಗುವಿನ ಬ್ಯಾಂಕ್ ಆಫ್ ಬರೋಡಾ ಬಿದರಕೋಟೆ ಶಾಖೆಯಲ್ಲಿ ಖಾತೆ ತೆರೆಯಲಾಗಿದೆ. ಉಳಿತಾಯ ಖಾತೆ ಸಂಖ್ಯೆ  73540100002158 ಸಂಖ್ಯೆಗೆ ಹಣ ಕಳುಹಿಸಬಹುದು ಎಂದು ಅವರು ಹೇಳಿದರು. ಪತ್ನಿ ರಮ್ಯಾ ಹಾಗೂ ಮಗ ಅಚ್ಚುತ್ ಕುಮಾರ್ ಗೋಷ್ಠಿಯಲ್ಲಿದ್ದರು.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago