ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ.
ಸಾಧಾರಣ ಜ್ವರ, ನೆಗಡಿ, ಕೆಮ್ಮು ಖಾತರಿಯಾದಲ್ಲಿ ಔಷಧಿ-ಮಾತ್ರೆಗಳನ್ನು ಸೇವಿಸುವುದರ ಜತೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವವರಿಗೆ ಪ್ರತ್ಯೇಕವಾಗಿ ಹೊರರೋಗಿ ಚೀಟಿ ನೀಡಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇಂದ್ರದಲ್ಲಿ ಈಗಾಗಲೇ ೨೦ ಬೆಡ್‌ಗಳ ವ್ಯವಸ್ಥೆ ಕಲ್ಪಿಸಿ, ದಾಖಲಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪರಿಶೀಲನೆ: ಕೆ.ಆರ್.ಆಸ್ಪತ್ರೆಯ ಹಳೇ ಜುಂದೇವ ಕಟ್ಟಡದಲ್ಲಿ ತೆರೆದಿರುವ ‘ಜ್ವರದ ಕ್ಲಿನಿಕ್‌ಗೆ ಭೇಟಿ ನೀಡಿದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಣಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೀಡಿರುವ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕರಲ್ಲಿ ಭಯ ಉಂಟು ಮಾಡದಂತೆ ಚಿಕಿತ್ಸೆ ನೀಡುವ ದೃಷ್ಟಿಯಿಂದ ಪ್ರತ್ಯೇಕವಾಗಿ ‘ಜ್ವರದ ಕ್ಲಿನಿಕ್’ ತೆರೆಯಲಾಗಿದೆ. ಇಲ್ಲಿ ಜ್ವರ, ನೆಗಡಿ, ಕೆಮ್ಮು, ಮೈ ಕೈ ನೋವು ಎಂದು ಬರುವ ರೋಗಿಗಳು ಬೇರೆ ರೋಗಿಗಳ ಜೊತೆ ಸೇರದಂತೆ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ವಾಡಿಕೊಳ್ಳಲಾಗಿದೆ. ಇಲ್ಲಿಯೇ ಒಪಿಡಿ ( ಹೊರರೋಗಿ ರಶೀದಿ ) ಚೀಟಿ ನೀಡಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಅಗತ್ಯವಿದ್ದರೆ ಮಾತ್ರ ದಾಖಲು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಸೋಂಕು ದೃಢಪಟ್ಟಿಲ್ಲ : ಕೆ.ಆರ್.ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಪ್ರತಿದಿನ ಸರಾಸರಿ ೫೦-೬೦ ಮಂದಿಗೆ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ ಯಾರಿಗೂ ಕೋವಿಡ್ ಸೋಂಕು ದೃಢಪಟ್ಟಿಲ್ಲ. ಸೋಂಕಿನ ಲಕ್ಷಣಗಳಿದ್ದು, ದಾಖಲಾಗುವವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ನಂಜುಂಡ ಸ್ವಾಮಿ, ಆರ್‌ಎಂಒ ರಾಜೇಶ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಿಇ ರಕ್ಷಿತ್ ಮತ್ತಿತರರು ಹಾಜರಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…