ಮೈಸೂರು: ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿಯ ಶವ ಅನುಮಾನಸ್ಪಪದ ರೀತಿಯಲ್ಲಿ ಪತ್ತೆಯಾಗಿದೆ.
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಬಾಲಕನ ಶವ ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸಾವನ್ನಪ್ಪಿರುವ ವಿದ್ಯಾರ್ಥಿ ಪ್ರಥಮ ಬಿಎಸ್‌ಸ್ಸಿ ವ್ಯಾಸಂಗ ಮಾಡುತ್ತಿದ್ದ ಹೈದರಾಬಾದ್ ಮೂಲದ ಅಕ್ಷಜ್(18) ಎಂಬಾತ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಯ ಕೈಗಳನ್ನು ಕಟ್ಟಿಹಾಕಿದ್ದು, ಆತನ ಮುಖಕ್ಕೆ ಪ್ಲಾಸ್ಟಿಕ್ ಕವರ್ ಬಿಗಿಯಲಾಗಿದ್ದು, ವಿದ್ಯಾರ್ಥಿ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಸ್ಥಳಕ್ಕೆ ಭೇಟಿ ನೀಡಿದ ಜಯಲಕ್ಷ್ಮಿಪುರಂ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.





