Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಸ್ತೆಯಲ್ಲಿ ಕಾಣಿಸಿಕೊಂಡ ಹುಲಿ; ಗ್ರಾಮಸ್ಥರಲ್ಲಿ ಭೀತಿ

ಮಲ್ಕುಂಡಿ: ಗ್ರಾಮೀಣ ಭಾಗಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟಾಗಿದೆ.
ಶನಿವಾರ ರಾತ್ರಿ ದುಗ್ಗಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿಯೊಂದು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಶನಿವಾರ ರಾತ್ರಿ ಹುಲ್ಲಹಳ್ಳಿಯಿಂದ ಶೆಟ್ಟಹಳ್ಳಿ ಗ್ರಾಮಕ್ಕೆ ಸಾರ್ವಜನಿಕರನ್ನು ಆಟೋ ಚಾಲಕರೊಬ್ಬರು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಹುಲಿಯೊಂದು ಕಾಣಿಸಿಕೊಂಡಿದೆ ಇದನ್ನು ಕಂಡ ಸಾರ್ವಜನಿಕರು ಭಯಬೀತರಾಗಿದ್ದಾರೆ. ಆಟೋ ಚಾಲಕ ತನ್ನ ಮೊಬೈಲ್ ನಲ್ಲಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.
ಜಯ ಕರ್ನಾಟಕ ಹೋಬಳಿ ಘಟಕದ ಅಧ್ಯಕ್ಷ ಕಾಶಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹುಲಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರು ಭಯಗೊಂಡಿದ್ದಾರೆ. ಈಚೆಗೆ ಬಳ್ಳೂರುಹುಂಡಿ ಗ್ರಾಮದ ರೈತರೊಬ್ಬರ ಮೇಲೆ ಹುಲಿ ದಾಳಿ ವಾಡಿತ್ತು. ಆದರೂ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹುಲಿ ಸೆರೆಗೆ ಬಿದ್ದಿಲ್ಲ. ಹುಲ್ಲಹಳ್ಳಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿ ರೈತರು ಸಾಕಿದ ಪ್ರಾಣಿಗಳನ್ನು ಕೊಂದುಹಾಕುತ್ತಿದ್ದರೂ ಅರಣ್ಯ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಹಲವು ಬಾರಿ ವಿಷಯ ಮುಟ್ಟಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಹುಲಿ, ಚಿರತೆ ಹಾಗೂ ಕಾಡಾನೆಗಳ ಹಾವಳಿಯಿಂದ ರೈತರು ಕಂಗಾಲಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ಭಯಭೀತರಾಗಿದ್ದಾರೆ. ಇನ್ನಾದರೂ ಅರಣ್ಯ ಅಧಿಕಾರಿಗಳು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ