ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ ಎಮ್ಮೆಮಾಡು ಕೂರುಳಿ ಗ್ರಾಮದಿಂದ ತೋಟದ ಮಾಲೀಕರೊಬ್ಬರು ಕೆಲಸಕ್ಕೆಂದು ಕಾರ್ಮಿಕರನ್ನು ಪಿಕ್ ಅಪ್ ವಾಹನದಲ್ಲಿ ಸಾಗಿಸುತ್ತಿದ್ದಾಗ ವಾಹನದ ಆಕ್ಸಲ್ ತುಂಡಾದ ಪರಿಣಾಮ ಚಕ್ರಕಳಚಿಕೊಂಡು ಅವಘಡ ಸಂಭವಿಸಿದೆ. ವಾಹನದಲ್ಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ದೃಶ್ಯ ನಾಪೋಕ್ಲುವಿನ ಆಟೋ ಚಾಲಕರೊಬ್ಬರ ಮೊಬೈಲ್ ನಲ್ಲಿ ಸೆರೆಸಿಕ್ಕಿದೆ. ಇದರಲ್ಲಿ ಪಿಕ್ ಅಪ್ ವಾಹನದ ಚಕ್ರ ಕಳಚುವ ದೃಶ್ಯ ಸೆರೆಯಾಗಿದ್ದು ಭಯಾನಕವಾಗಿದೆ. ಸುಮಾರು 20.ಮೀ ನಷ್ಟು ದೂರ ಚಲಿಸಿದ ವಾಹನವನ್ನು ಪಲ್ಟಿಯಾಗದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ನಿಯಂತ್ರಿಸಿದ್ದಾನೆ.ಇದರಿಂದ ಭಾರಿ ಅನಾಹುತ ತಪ್ಪಿದಂತ್ತಾಗಿದೆ.ವಾಹನದಲ್ಲಿ ಸಣ್ಣಮಕ್ಕಳು ಸೇರಿದಂತೆ 15ಕ್ಕೂ ಅಧಿಕ ಕಾರ್ಮಿಕರಿದ್ದು ಅದೃಷ್ಟವಶಾತ್ ಎಲ್ಲಾರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಪೋಕ್ಲು ವ್ಯಾಪ್ತಿಯಲ್ಲಿ ಕಾಫಿ,ಕಾಳುಮೆಣಸು ಕೊಯ್ಲು ಕಾರ್ಯ ಬಿರುಸಿನಿಂದ ಸಾಗುತ್ತಿದ್ದು,ಇದಕ್ಕೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕಾರ್ಮಿಕರು ಆಗಮಿಸಿದ್ದು ತೋಟದ ಮಾಲೀಕರು, ಹಾಗೂ ಗೂಡ್ಸ್ ವಾಹನ ಸವಾರರು ತಮ್ಮ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೋಯುತ್ತಿದ್ದಾರೆ. ಗೂಡ್ಸ್ ವಾಹನಗಳಲ್ಲಿ ಜನರನ್ನು ಸಾಗಿಸುವುದು ಕಾನೂನು ಬಾಹಿರವಾಗಿದ್ದರು ನಿರಂತರವಾಗಿ ಇದು ನಡೆಯುತ್ತಿದೆ.ಗೂಡ್ಸ್ ವಾಹನದಲ್ಲಿ ಜನರನ್ನು ಕರೆದೊಯ್ಯುತ್ತಿರುವುದರಿಂದ ಇಂತಹ ಅನಾಹುತಗಳು ಸಂಭವಿಸುವಂತ್ತಾಗಿದೆ.ಈ ಹಿಂದೆ ಇದರ ಬಗ್ಗೆ ಪೋಲಿಸ್ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇನ್ನಾದರೂ ಪೊಲೀಸರುಎಚ್ಚೆತ್ತು ಕೊಂಡು ಗೂಡ್ಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಪಕ್ಷಾತೀತವಾಗಿ ಸಿಎಂ ಸಹಿ ಪಡೆದ ಸದಸ್ಯರು
Next Article ಬಿಜೆಪಿ, ಕಾಂಗ್ರೆಸ್ಗೆ ಜಾ.ದಳದ ಭಯ : ಹೆಚ್ಡಿಕೆ