ಜಿಲ್ಲೆಗಳು

ಗಾಂಧಿಪ್ರತಿಮೆ ಬಳಿ ಮಹಿಳೆ ಏಕಾಂಗಿ ಪ್ರತಿಭಟನೆ

ಮೈಸೂರು: ಗಂಡ-ಹೆಂಡತಿ ಇಬ್ಬರೂ ಸೇರಿಕೊಂಡು ವರುಣ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ವರುಣ ಪೊಲೀಸ್ ಠಾಣೆಗೆ ದೂರು ನೀಡಿ ವರ್ಷ ಕಳೆದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಎಂ.ಚೌಡಯ್ಯ ಅವರ ಸಾಮಾಜಿಕ, ಶೈಕ್ಷಣಿಕ ಚಾರಿಟಬಲ್ ಇಂಟರ್ ನ್ಯಾಷನಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷರಾದ ಸರ್ವಮಂಗಳ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ತಳಿ ಬಳಿ ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರುಣ ಠಾಣಾ ವ್ಯಾಪ್ತಿಯಲ್ಲಿ ಪತಿ-ಪತ್ನಿಯರಿಬ್ಬರೂ ಸೇರಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಕಳೆದ ವರ್ಷವೇ ವರುಣ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆದರೆ, ಪೊಲೀಸರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮತ್ತು ಬೆಂಗಳೂರಿನಲ್ಲಿಯೂ ಸುದ್ದಿಗೋಷ್ಠಿ ಮಾಡಿದ್ದೇನೆ. ಆದರೂ ಕ್ರಮ ಜರುಗಿಸಿಲ್ಲ ಎಂದು ದೂರಿದರು.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

7 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

8 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

8 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

9 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

9 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

10 hours ago