ಮೈಸೂರು: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಸ್ಟಾಫ್ ನರ್ಸ್ ಓರ್ವರ ಮೇಲೆ ಯುವಕನೋರ್ವ ಚಾಮುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೆಬ್ಬಾಳಿನಲ್ಲಿರುವ ಭಾರತ್ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕು ಯಳಂದೂರು ನಿವಾಸಿ ನಂಜುಂಡಸ್ವಾಮಿ ಎಂಬಾತನೇ ಶ್ರುಶ್ರೂಷಕಿ ಹಾಗೂ ಆಕೆಯ ಸಹೋದ್ಯೋಗಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಜೈಲು ಸೇರಿದ್ದಾನೆ.
ನಗರದ ಹೆಬ್ಬಾಳ್ ಬಡಾವಣೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶುಶ್ರೂಷಕಿ ಹಾಗೂ ಆಸ್ಪತ್ರೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜುಂಡಸ್ವಾಮಿ ನಡುವೆ ಸ್ನೇಹವಿತ್ತು.
ಆಕೆಯೊಂದಿಗೆ ಸಲುಗೆಯಿಂದಿದ್ದ ನಂಜುಂಡಸ್ವಾಮಿ, ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ಆತನ ಮನವಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಆಕೆಯ ಮೇಲೆ ದ್ವೇಷ ಸಾಧಿಸುತ್ತಿದ್ದ ನಂಜುಂಡಸ್ವಾಮಿ ಆಕೆಯ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾನೆ.
ಅದರಂತೆ ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ನುಗ್ಗಿದ ನಂಜುಂಡಸ್ವಮಿ ಹಾಡು ಹಗಲೇ ಆಕೆಯ ಕುತ್ತಿಗೆ ಬಳಿ ಚಾಕುವಿನಿಂದ ಇರಿದಿದ್ದಾನೆ. ಗಯಾಳು ನೆರವಿಗೆ ಬಂದ ಮತ್ತೊಬ್ಬ ನರ್ಸ್ ಮೇಲೂ ದಾಳಿ ಮಾಡಿದ್ದಾನೆ ಎನ್ನಲಾಗಿದೆ.
ಕೂಡಲೇ ಸಾರ್ವಜನಿಕರು ಮಧ್ಯ ಪ್ರವೇಶಿಸಿ ಇಬ್ಬರನ್ನೂ ರಕ್ಷಿಸಿದ್ದಾರೆ. ಸ್ಥಳಕ್ಕೆ ಬಂದ ಹೆಬ್ಬಾಳ್ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಶ್ರಶ್ರೂಷಕಿಯರಿಗೆ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…