ಜಿಲ್ಲೆಗಳು

ಅಪಘಾತ : ಮೃತನ ಕುಟುಂಬಕ್ಕೆ ಪರಿಹಾರ ನೀಡಿಕೆ

ಪಾಂಡವಪುರ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ 10 ಲಕ್ಷ ವಿಮೆ ಹಣದ ಚೆಕ್‌ನ್ನು ವಿತರಣೆ ಮಾಡಲಾಯಿತು.
ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಬಳಿ ಎದುರಿನ ಎಸ್‌ಬಿಐ ಶಾಖೆಯಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅಪಘಾತದಲ್ಲಿ ಮೃತಪಟ್ಟ ಎಲೆಕೆರೆ ಗ್ರಾಮದ ವ್ಯಕ್ತಿ ಚಂದ್ರಶೇಖರ್ ಅವರ ಪತ್ನಿ ಸುಮತಿ ಅವರಿಗೆ ವಿತರಣೆ ಮಾಡಿದರು.
ಎಸ್‌ಬಿಐನ ಪ್ರದೇಶಿಕ ಆಯುಕ್ತೆ ಎ.ಕೆ.ಸಂಧ್ಯಾ ಮಾತನಾಡಿ, ಭಾರತೀಯ ಸ್ಟೇಟ್‌ಬ್ಯಾಂಕ್ ವಿಮೆ ಕಂಪನಿಯೊಂದಿಗೆ ಗ್ರಾಹಕರಿಗೆ ವಿಮೆ ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರು ವಿಮೆ ಮಾಡಿದರೆ ಒಂದು ವೇಳೆ ಅಕಾಲಿಕ ಮರಣಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ವಿಮೆ ಹಣದ ಮೊತ್ತ ನೀಡಲಾಗುವುದು ಎಂದರು.
ಗ್ರಾಹಕರು ೧೦೦ ರೂ. ಪಾವತಿಸಿದರೆ ೨ ಲಕ್ಷ, ೫೦೦ ರೂ.ಪಾವತಿಸಿದರೆ ೧೦ ಲಕ್ಷ ಹಾಗೂ ೧೦೦೦ ರೂ. ವಿಮೆ ಹಣ ಪಾವತಿಸಿದರೆ ೨೦ ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಎಲೆಕೆರೆ ಗ್ರಾಮದ ಚಂದ್ರಶೇಖರ್ ಅವರು ೫೦೦ ವಿಮೆ ಪಾವತಿಸಿದ್ದರು ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ಕುಟುಂಬಕ್ಕೆ ೧೦ ಲಕ್ಷ ರೂ. ವಿಮೆ ಹಣ ನೀಡಲಾಗಿದೆ. ಹಾಗಾಗಿ ಎಸ್‌ಬಿಐನಲ್ಲಿ ಖಾತೆ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು ವಿಮೆ ಮಾಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ನಯನ ಮಾತನಾಡಿ, ಪ್ರತಿಯೊಬ್ಬರು ಗ್ರಾಹಕರು ಬ್ಯಾಂಕ್ ಅಧಿಕಾರಿಗಳ ಸಲಹೆಯಂತೆ ವಿಮೆ ಮಾಡಿಸಿದರೆ ಮುಂದಿನ ದಿನಗಳಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ವೇಳೆ ಸಿಪಿಐ ವಿವೇಕಾನಂದ, ಶಾಖಾ ವ್ಯವಸ್ಥಾಪಕ ಎಂ.ಪ್ರಸಾದ್, ವಿರೋಪಾಕ್ಷ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

14 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

49 mins ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

1 hour ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

1 hour ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

1 hour ago