ಜಿಲ್ಲೆಗಳು

ತಿ.ನರಸೀಪುರ : ಟ್ರಾಕ್ಟರ್ ಮಗುಚಿ ಮೂವರು ಸಾವು

ತಿ.ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ಘಟನೆ

ತಿ.ನರಸೀಪುರ: ಹಲ್ಲಿನ ಜೋಳದ ಬಿಡಿಸುವ ಯಂತ್ರದ ಟ್ರಾಕ್ಟರ್ ಮಗುಚಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆರಗ್ಯಾತನಹಳ್ಳಿ ಸಮೀಪದಲ್ಲಿ ಶನಿವಾರ ನಡೆದಿದೆ.

ತಾಲ್ಲೂಕಿನ ಬೂದಹಳ್ಳಿ ಗ್ರಾಮದ ಲೇ. ಗವಿಸಿದ್ದಯ್ಯ ಅವರ ಮಗ ಮರಿಜೋಗಿ(೪೫), ಮಹದೇವ್ ಎಂಬವರ ಮಗ ಪ್ರಕಾಶ್ (೩೩) ಹಾಗೂ ನಾಗರಾಜು ಎಂಬವರ ಮಗ ಸಂತೋಷ್(೧೯) ಮೃತಪಟ್ಟವರು.

ಚಿಟಗಯ್ಯನಕೊಪ್ಪಲು ಗ್ರಾಮದಿಂದ ನೆರಗ್ಯಾತನಹಳ್ಳಿ ಹೋಗುವ ರಸ್ತೆಯಲ್ಲಿ ಹಲ್ಲಿನ ಜೋಳ ಬಿಡಿಸುವ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಅದರಲ್ಲಿ ಕುಳಿತಿದ್ದ ಈ ಮೂವರು ಮೃತಪಟ್ಟಿದ್ದಾರೆ.

ಎಸ್‌ಪಿ ಭೇಟಿ: ಸ್ಥಳಕ್ಕೆ ಎಸ್‌ಪಿ ಆರ್. ಚೇತನ್, ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಗೋವಿಂದರಾಜು ಹಾಗೂ ಇನ್‌ಸ್ಪೆಕ್ಟರ್ ಕೃಷ್ಣಪ್ಪ, ಅಪರಾಧ ವಿಭಾಗದ ಪಿಎಸ್‌ಐ ಪಚ್ಚೇಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

andolana

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

2 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

2 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

2 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

2 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

2 hours ago