ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಕೆ ಶಿಪ್ ಸೂಪರ್ವೈಸರ್ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ ( 26) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಜಡೇಸ್ವಾಮಿ ಎಂಬವರಿಗೆ ಸೇರಿದ ಲಾರಿ ಮಂಡ್ಯದ ಸಕ್ಕರೆ ಕಾರ್ಖಾನೆಯಿಂದ ಸಕ್ಕರೆ ತುಂಬಿಕೊಂಡು ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಕೇಶಿಫ್ ರಸ್ತೆ ಕಾಮಗಾರಿಗೆ ಬಳಸುತ್ತಿದ್ದ ಟಿಪ್ಪರ್ ನ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟಿಪ್ಪರ್ ಹಾಗೂ ಲಾರಿ ಜಖಂ ಗೊಂಡಿದ್ದು ಟಿಪ್ಪರ್ ವಾಹನದ ಎಡಬದಿಯಲ್ಲಿ ಕುಳಿತಿದ್ದ ಕೆ ಶಿಪ್ ಸೂಪರ್ವೈಸರ್ ಎರಡು ವಾಹನದ ಮಧ್ಯೆ ಸಿಲುಕಿಕೊಂಡಿದ್ದರು ನಂತರ ಸಾರ್ವಜನಿಕರು ಸಹಕಾರದಿಂದ ವಾಹನದಿಂದ ರಕ್ಷಿಸಿದ್ದಾರೆ. ಆದರೂ ಸಹ ಕ್ಲೀನರ್ ನ ಎಡ ಕೈ ಕಟ್ಟಾಗಿ ಎದೆಯ ಭಾಗಕ್ಕೆ ಹೆಚ್ಚಿನ ಗಾಯವಾಗಿದ್ದರಿಂದ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…