ಜಿಲ್ಲೆಗಳು

ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಆರೋಪ : ಉಸ್ತುವಾರಿ ಸ್ಥಾನದಿಂದ ಎಸ್‌ಟಿಎಸ್‌ ರನ್ನು ಬದಲಾಯಿಸುವಂತೆ ಒತ್ತಾಯ

ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ,

ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ ಹಲವಾರು ದಿನಗಳಿಂದ ಆನೆ ಚಿರತೆ ಹಾಗೂ ಹುಲಿಗಳಿಂದ. ಅಮಾಯಕ ಮುಗ್ಧ ಜೀವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇದಕ್ಕೂ ಅವರಿಗೂ ಸಂಬಂಧವಿಲ್ಲದಂತೆ ಕಾಲ ಹರಣ ಮಾಡುತ್ತಿದ್ದಾರೆ. ರಸ್ತೆ ಬದಿಯಲ್ಲಿ ಚಾಕಲೇಟ್ ತರಲು ಹೋದ ಪುಟ್ಟ ಬಾಲಕನ ಸಾವು ಮಾನವೀಯ ಮೌಲ್ಯಗಳು ಇರುವ ಮನುಷ್ಯರಿಗೆ ಕಣ್ಣಂಚಿನಲ್ಲಿ ನೀರು ಬರುತ್ತಿದೆ. ಮಹಿಳೆಯರು ಸೇರಿದಂತೆ ಪುಟ್ಟ ಪುಟ್ಟ ಬಾಲಕರು ದಿನದಿಂದ ದಿನಕ್ಕೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಡಂಚಿನ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳನ್ನು ಚರ್ಚಿಸಿ. ಕಾಡಿನಿಂದ ಪ್ರಾಣಿಗಳು ಹೊರಬರದಂತೆ ಹಾಗೂ ನಾಡಿನಲ್ಲಿರುವ ಚಿರತೆಗಳನ್ನು. ಸೆರೆಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕೆ ಚಿರುಕು ನೀಡದೇ ಮತ್ತಷ್ಟು ಜೀವಗಳ ಬಲಿಗೆ ಕಾಯುತ್ತಿದ್ದಾರಾ.? ಬಾಲಕರು ಮಹಿಳೆಯರು ರೈತರು ಶೋಷಿತ ಸಮುದಾಯಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ರೈತರು ಹೊಲಗದ್ದೆಗಳಿಗೆ ತೆರಳಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಸಂಜೆ 6.ರ ನಂತರ ಮನೆಯಿಂದ ಹೊರಬರದಂತೆ ಕಟ್ಟೆಚರ ವಹಿಸಲಾಗುತ್ತಿದೆ ಕಣ್ಣ ಮುಚ್ಚಾಲೆ ಆಡುವ ವಿದ್ಯುತ್ ಕಂಪನಿ ಗಳಿಂದ ರೈತರಿಗೆ ಬಾರಿ ಅನಾನುಕೂಲ ಉಂಟಾಗಿದೆ. ವಿದ್ಯುತ್ ಬಂದಾಗ ಹೊಲಗದ್ದೆಗಳಿಗೆ ತೆರಳಿ ಪಂಪ್ಸೆಟ್ ಆನ್ ಮಾಡಬೇಕು ಇಲ್ಲದಿದ್ದರೆ ರೈತರು ಬೆಳೆ ಬೆಳೆಯಲು ಸಾಧ್ಯವಿಲ್ಲ ಎಷ್ಟು ದಿನ ಮನೆಯಲ್ಲಿ ಇರಲು ಸಾಧ್ಯ. ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ತ್ರೈಮಾಸಿಕ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೆ ಈ ದುರ್ಘಟನೆಗಳು ನಡೆಯುತ್ತಿರಲಿಲ್ಲ.

ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ. ಮತ್ತೆ ಬೆಂಗಳೂರಿಗೆ ಹೋಗುವ ಸಚಿವರು ಮೈಸೂರು ಜಿಲ್ಲೆಗೆ ಅವಶ್ಯಕತೆ ಇಲ್ಲ. ಇವರು ಜನರ ಸಾವು ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸದ ಸಚಿವರು ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಆಶಯಗಳಿಗೆ ಅವಮಾನ ಮಾಡುವ ಬದಲು ಸರ್ಕಾರ ಇವರನ್ನು ತಕ್ಷಣದಿಂದಲೇ ಬದಲಾವಣೆ ಮಾಡಿ. ಎಂದು  ಕುರುಬುರು ಶಾಂತಕುಮಾರ್ ಅವರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸುವ ಮೂಲಕ ಒತ್ತಾಯಿಸಿದ್ದಾರೆ.

 

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago