ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ ಭರವಸೆ ನೀಡಿದರು.
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರಿಗೆ 2023 ನೂತನ ವರ್ಷದ ದಿನಚರಿಯನ್ನು ವಿತರಿಸಿ ಬಳಿಕ ಮಾತನಾಡಿದರು. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಹಿರಿದು , ಇಂತಹ ಕಾಯಕದಲ್ಲಿ ತೊಡಗಿರುವ ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘ, ದೇವಾಲಯಗಳ ಕಟ್ಟಡ ನಿರ್ಮಾಣ ಇನ್ನಿತರೆ ಕ್ಷೇತ್ರಗಳಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶೇ. ಇಂತಿಷ್ಟು ಅನುದಾನವನ್ನು ನೀಡುವ ಅವಕಾಶವಿದೆ.
ಈ ದಿಸೆಯಲ್ಲಿ ಪೂಜ್ಯಶ್ರೀಗಳ ಗಮನಕ್ಕೆ ತಂದು ಪತ್ರಕರ್ತರ ಭವನ ಕಟ್ಟಡಕ್ಕೆ ನಮ್ಮಿಂದಾದ ಸೇವೆಯನ್ನು ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶೇಖರ್, ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ಎಂ , ಪ್ರಧಾನ ಕಾರ್ಯದರ್ಶಿ ಕಣ್ಣೂರು ಬಸವರಾಜ್, ನಿರ್ದೇಶಕರಾದ ಸೋಮಶೇಖರ್, ಮಂಗಲ ಲಿಂಗರಾಜ್, ಮಧು ಅಜ್ಜಿಪುರ, ಸದಸ್ಯರುಗಳಾದ ಅಜ್ಜೀಪುರ ಸುರೇಶ್, ರವಿ, ಹನೂರು ರಾಜೇಶ್, ಪ್ರಭುಸ್ವಾಮಿ, ಬಂಡಳ್ಳಿ ಶಿವಕುಮಾರ್, ಹನೂರು ಮಂಜೇಶ್, ಮಾದೇವಸ್ವಾಮಿ, ರಮೇಶ್ ಗುಂಡಾಪುರ ಉಪಸ್ಥಿತರಿದ್ದರು.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…