* ಪೋಷಕರ ಜೊತೆಗೂಡಿ ವಿದ್ಯಾರ್ಥಿಗಳಿಂದ ಹೆದ್ದಾರಿ ಸಂಚಾರ ತಡೆ
* ಹೆಚ್ಚುವರಿ ಬಸ್ ಓಡಿಸಲು ಒತ್ತಾಯ
ಚಾಮರಾಜನಗರ: ತಾಲೂಕಿನ ಮಲ್ಲಯ್ಯನಪುರ ಸಮೀಪದ ಆದರ್ಶ ಶಾಲೆಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಡಾಂಬರ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಪೋಷಕರ ಜೊತೆಗೂಡಿ ಚಾಮರಾಜನಗರ-ಗುಂಡ್ಲುಪೇಟೆ ರಾಜ್ಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟಿಸಿದರು.
ನಗರದ ಹೊರ ವಲಯದ ಬೈಪಾಸ್ ರಸ್ತೆಯ ಸೇತುವೆ ಬಳಿಯ ಹೆದ್ದಾರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಿಂದ ಆದರ್ಶ ಶಾಲೆಗೆ ನೂರಾರು ವಿದ್ಯಾರ್ಥಿಗಳು ಹೋಗುತ್ತಾರೆ. ಶಾಲೆಯಲ್ಲಿ ೫೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಚಾಮರಾಜನಗರದಿಂದ ಶಾಲೆಗೆ ಬೆಳಗ್ಗೆ ೯ ಹಾಗೂ ೯.೧೫ಕ್ಕೆ ಎರಡು ಬಸ್‌ಗಳಿವೆ. ಉಳಿದಂತೆ ಶನಿವಾರ ಬೆಳಗ್ಗೆ ಒಂದು ಬಸ್ ಮಾತ್ರ ಬಿಡಲಾಗಿದೆ ಎಂದು ತಿಳಿಸಿದರು.
ಬೆಳಗ್ಗೆ ೯ ಗಂಟೆಗೆ ಪರೀಕ್ಷೆ ಇದ್ದರೆ ಸೂಕ್ತ ಸಮಯಕ್ಕೆ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಅಲ್ಲದೇ ಸಂಜೆಯ ವೇಳೆಯೂ ೨ ಬಸ್ ಮಾತ್ರ ಇರುವುದರಿಂದ ಒಂದು ಬಸ್‌ನಲ್ಲಿ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತುಂಬಲಾಗುತ್ತಿದೆ ಎಂದು ದೂರಿದರು.
೨ ಬಸ್‌ಗಳು ಇರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು ನಗರದಿಂದ ಶಾಲೆಯವರೆಗೆ ೪ ಕಿ.ಮೀ ನಡೆಯಬೇಕಿದೆ ಈ ಸಂಬಂಧ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಬೆಳಗ್ಗೆ ಹಾಗೂ ಸಂಜೆ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು. ಜೊತೆಗೆ ಹೆದ್ದಾರಿಯಿಂದ ಶಾಲೆಯವರೆಗೆ ೩ ಕಿ.ಮೀ ರಸ್ತೆ ಸಂಪೂರ್ಣ ಹಾಳಾಗಿದ್ದು ಡಾಂಬರ್ ರಸ್ತೆಯಾಗಿ ಅಭಿವೃದ್ಧಿ ಪಡಿಸಬೇಕು. ಮಳೆ ಬಂದರೆ ಈ ರಸ್ತೆ ಸಂಪೂರ್ಣ ಕೆಸರುಮಯವಾಗುವುದರಿಂದ ಮಕ್ಕಳು ಶೂ ಬಿಚ್ಚಿ ನಡೆದುಕೊಂಡು ಹೋಗಬೇಕಿದೆ ಎಂದು ದೂರಿದರು.
ಪ್ರತಿಭಟನೆ ನಡೆಸಿದ್ದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಚಾರ ಬಂದ್ ಆಗಿತ್ತು. ಕಿ.ಮೀ.ಗಟ್ಟಲೇ ವಾಹನಗಳು ರಸ್ತೆಯಲ್ಲಿ ನಿಂತಿದ್ದವು. ವಾಹನ ಸವಾರರು ಪರದಾಡಿದರು.
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…