ಜಿಲ್ಲೆಗಳು

ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸಿ : ಎನ್.ಯು.ನಾಚಪ್ಪ

ಮಡಿಕೇರಿ: ಕೇಂದ್ರ ಸರ್ಕಾರದ ಅಧೀನದ ಕೇಂದ್ರ ಬುಡಕಟ್ಟು ಸಚಿವಾಲಯವು  2017ರಲ್ಲಿ ಮರು ವ್ಯಾಖ್ಯಾನಿಸಿದ ಮಾನದಂಡದಡಿ ಕೊಡವ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಭದ್ರತೆಯನ್ನು ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನ ಮೂಲ ಬುಡಕಟ್ಟು ಜನಾಂಗವಾಗಿರುವ ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದು ತ್ವರಿತವಾಗಿ ಆಗದಿದ್ದರೆ ಕೊಡವ ಬುಡಕಟ್ಟು ಜನಾಂಗದ ಭವಿಷ್ಯವು ಕತ್ತಲೆಯಲ್ಲಿ ಮುಳುಗುತ್ತದೆ. ಕೊಡವರ ಜಾನಪದ ಗುರುತು ಮತ್ತು ಭೌಗೋಳಿಕ-ರಾಜಕೀಯ ಅಸ್ತಿತ್ವಕ್ಕೆ ಹಾನಿಯಾಗಲಿದೆ. ಇತರ ಜನಾಂಗೀಯ ಗುಂಪುಗಳಿಗೆ ನೀಡಲಾಗುವ ಅದೇ ಸಾಂವಿಧಾನಿಕ ಪೋಷಣೆಯನ್ನು ಕೊಡವ ಬುಡಕಟ್ಟು ಜನಾಂಗಕ್ಕೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
17 ಆಗಸ್ಟ್ , 2022ರಂದು ಕರ್ನಾಟಕ ಸರ್ಕಾರದ ಬುಡಕಟ್ಟು ಕಲ್ಯಾಣ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನಮ್ಮ ಬೇಡಿಕೆಗೆ ಒಪ್ಪಿಗೆ ನೀಡಿ, ಕಡತವನ್ನು ಕರ್ನಾಟಕದ ಸಿಎಂಗೆ ರವಾನಿಸಿದರು. ಆದರೆ ನಂತರದ ದಿನಗಳಲ್ಲಿ ಕಡತವನ್ನು ನಿರ್ಲಕ್ಷಿಸಲಾಗಿದೆ. ಇದು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ನಾಚಪ್ಪ ಟೀಕಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago