ಹನೂರು : ನೂತನವಾಗಿ 620 ಕೆಎಸ್‌ಆರ್‌ಟಿಸಿ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು ಬಸ್ ಗಳು ಬಂದ ನಂತರ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗುವುದೆಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.
ವಿಧಾನಸಭಾ ಅಧಿವೇಶನದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ರವರ ಪ್ರಶ್ನೆಗೆ ಸಚಿವ ಶ್ರೀರಾಮುಲು 179 ಗ್ರಾಮಗಳ ಪೈಕಿ 174 ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉತ್ತರಿಸಿದ್ದರು. ಈ ಉತ್ತರ ಅಸಮರ್ಪಕವಾಗಿದ್ದರಿಂದ ಶಾಸಕ ನರೇಂದ್ರ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 480 ಹಳ್ಳಿಗಳಿವೆ. 179 ಕಂದಾಯ ಗ್ರಾಮಗಳಿದ್ದು ಇವುಗಳಲ್ಲಿ 174 ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿಲಾಗಿದೆ ಎಂದು ಉತ್ತರಿಸಿದ್ದಾರೆ. 174 ಗ್ರಾಮಗಳಿಗೂ ಸಹ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಪದೇ ಪದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. 62 ಹಾಡಿಗಳಿಗೆ ರಸ್ತೆ ಸಂಪರ್ಕ ಇಲ್ಲದೆ ಇರುವುದರಿಂದ ಆಟೋ ದ್ವಿಚಕ್ರ ವಾಹನ ಸೇರಿದಂತೆ ಯಾವ ವಾಹನಗಳ ಸಂಪರ್ಕವೂ ಇಲ್ಲ, ಇಲ್ಲಿನ ಗ್ರಾಮಗಳ ಜನರಿಗೆ ಆರೋಗ್ಯ ಹದಗೆಟ್ಟರೆ ಡೋಲಿ ಮುಖಾಂತರ ಸಾಗಿಸುವಂತಹ ಪರಿಸ್ಥಿತಿ ಬಂದಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆಯವರ ಗಮನ ಸೆಳೆದರು.
ಈ ವೇಳೆ ಸಚಿವ ಶ್ರೀರಾಮುಲು ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರದ ಲೋಕನಹಳ್ಳಿ ಹನೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿರುವುದು ಗಮನಕ್ಕೆ ಬಂದಿದೆ ಈಗಾಗಲೇ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನೂತನ ಬಸ್ ಗಳು ಬಂದ ನಂತರ ಹನೂರು ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…