ಜಿಲ್ಲೆಗಳು

ಆಡಳಿತ ವರ್ಗದ ಬೇಜವಾಬ್ದಾರಿತನಕ್ಕೆ ಮೈಸೂರು ನಗರವೇ ಸಾಕ್ಷಿ

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ.

ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅಂತಹ ನಗರ ಇಂದು ಹಾಳುಹಂಪೆ ಮಾದರಿಯತ್ತ ಹೊರಳುತ್ತಿರುವುದು ಆಡಳಿತ ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಬದಲಾದ ಕಾಲಘಟ್ಟದಲ್ಲಿ ಅಭಿವೃದ್ದಿಯ ಪತದತ್ತ ಸಾಗಬೇಕಿದ್ದ ಮೈಸೂರು ನಗರದ ರಸ್ತೆಗಳು ಬೇಜವಾಬ್ದಾರಿ ಆಡಳಿತ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಮುಂದಾಲೋಚನೆಯೇ ಇಲ್ಲದೆ ಮಾಡಿದ ಯೋಜನೆಗಳು ಮೈಸೂರು ನಗರವನ್ನು ನೀರಿನಲ್ಲಿ ಮುಳುಗಿಸುತ್ತಿರುವುದು ಇತ್ತೀಚೆಗೆ ಸುರಿದ ಮಳೆಯಿಂದ ಸಾಬೀತಾಗಿದೆ.

ಸರ್ಕಾರದಲ್ಲಿ ಹಣವಿದ್ದು, ಯಾವುದೇ ರೀತಿಯ ಕೊರತೆ ಇಲ್ಲ ಎಂದು ಬೊಬ್ಬೆ ಹೊಡೆಯುವ ಆಡಳಿತಾರೂಢ ಪಕ್ಷಗಳ ಸಚಿವರು, ಶಾಸಕರು ಮೈಸೂರು ನಗರದ ಮೋರಿಗಳನ್ನು ಸ್ವಚ್ಛ ಮಾಡಿಸಲು ಸಾಧ್ಯವಾಗಿಲ್ಲದಿರುವುದು, ಇವರ ಆಡಳಿತ ವೈಖರಿಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಈ ಬಾರಿ ಅದ್ದೂರಿ ದಸರಾ ಎಂದು ಘೋಷಿಸಲಾಗಿದ್ದು, ಕೋಟ್ಯಂತರ ರೂ.ಗಳನ್ನು ಅದಕ್ಕಾಗಿ ವ್ಯಯಿಸಲಾಗುತ್ತಿದೆ. ಆದರೆ, ಮೈಸೂರು ನಗರದ ಹೃದಯಭಾಗದಲ್ಲಿರುವ ರಸ್ತೆಗಳು ಆಡಳಿತ ವ್ಯವಸ್ಥೆಯ ಕರ್ತವ್ಯಲೋಪಕ್ಕೆ ಸಾಕ್ಷಿಯಾಗಿದ್ದು, ಅದ್ದೂರಿ ದಸರಾ ಎಂಬುದು ಆಡಂಬರದ ಹೇಳಿಕೆಯಾಗಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದರೂ, ಈವರೆಗೆ ಮೈಸೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವ ಗೋಜಿಗೆ ಹೋಗದಿರುವುದು ಅಧಿಕಾರಿ ವರ್ಗ ಹಾಗೂ ಆಡಳಿತ ವ್ಯವಸ್ಥೆಯ ನಡುವೆ ಹೊಂದಾಣಿಕೆ ಇಲ್ಲದಿರುವುದನ್ನು ಎತ್ತಿ ತೋರುತ್ತಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ತತ್‌ಕ್ಷಣ ಕ್ರಮ ತೆಗೆದುಕೊಳ್ಳದಿದ್ದಲ್ಲಿ ದಸರಾ ಮಹೋತ್ಸವದ ಈ ಹೊತ್ತಿನಲ್ಲಿ ಮೈಸೂರಿನ ಮಾನ ವಿಶ್ವದೆಲ್ಲೆಡೆ ಹರಾಜಾಗುವುದು ನಿಶ್ಚಿತ. ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಮೈಸೂರು ನಗರದ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು. ಒಂದು ವೇಳೆ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಅನಿಕೇತನ ಸೇವಾ ಟ್ರಸ್ಟ್ ನ  ಅಧ್ಯಕ್ಷರಾದ ಕೆ ವಿ ಮಲ್ಲೇಶ್ ಅಭಿಪ್ರಾಯಪಟ್ಟಿದ್ದಾರೆ.

andolanait

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

8 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

8 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

8 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

9 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

11 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

12 hours ago