ಅಗತ್ಯ ಕ್ರಮ ಕೈಗೊಳ್ಳಲು ಮುಂದಾದ ಜಿಲ್ಲಾಡಳಿತ / ಸೋಂಕಿತ ಹಂದಿಗಳ ವಧೆಗೆ ಸೂಚನೆ
ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಹಂದಿ ಸಾಕಾಣಿಕಾ ಕೇಂದ್ರದಲ್ಲಿರುವ ಹಂದಿಗಳಲ್ಲಿ ಜ್ವರ ಇರುವುದು ದೃಢಪಟ್ಟಿದೆ.
ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಿದೆ. ಈ ಹಂದಿ ಸಾಕಾಣಿಕ ಕೇಂದ್ರದ ೧ ಕಿ.ಮೀ ವ್ಯಾಪ್ತಿಯನ್ನು ರೋಗ ಪೀಡಿತ ವಲಯವೆಂದು ಮತ್ತು ೧೦ ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ.
ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡಬೇಕೆಂದು ಆದೇಶಿಸಲಾಗಿದೆ. ರೋಗ ಪೀಡಿತ ಹಂದಿ ಫಾರಂನಿಂದ ೧೦ ಕಿ.ಮೀ. ಒಳಗಿನ ಎಲ್ಲಾ ಹಂದಿ ಸಾಕಾಣೆದಾರರು ಹೊಸದಾಗಿ ಹಂದಿಗಳನ್ನು ಬೇರೆ ಕಡೆಯಿಂದ ಕೊಂಡು ತರಬಾರದು. ಹಂದಿಗಳ ಮತ್ತು ಹಂದಿ ಸಾಕಾಣಿಕೆ ಕೇಂದ್ರಗಳಲ್ಲಿನ ಕೆಲಸಗಾರರ ಸಂಚಾರ ನಿಯಂತ್ರಿಸಬೇಕು. ಹಂದಿಗಳಿಗೆ ಹೋಟೆಲ್ ಹಾಸ್ಟೆಲ್‌ಗಳಲ್ಲಿನ ಮಿಕ್ಕಿದ ಆಹಾರ ಸಂಗ್ರಹಿಸಿ ತಿನ್ನಿಸುವವರು ಕಡ್ಡಾಯವಾಗಿ ಅಂತಹ ಆಹಾರ ಪದಾರ್ಥವನ್ನು ಕನಿಷ್ಟ ೨೦ ನಿಮಿಷಗಳ ಕಾಲ ಬೇಯಿಸಿ ಕೊಡಬೇಕೆಂದು ಸೂಚಿಸಲಾಗಿದೆ.
ಹಂದಿ ಮಾಂಸದ ಹೋಟೆಲ್ ಮತ್ತು ಹಂದಿ ಮಾಂಸ ಮಾರಾಟ ಮಾಡುವ ಅಂಗಡಿಯಲ್ಲಿನ ಉಳಿಕೆ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಹಂದಿಗಳಿಗೆ ನೀಡಬಾರದು. ಸಂದರ್ಶಕರಿಗೆ ಹಂದಿ ಫಾರಂ ಒಳಗೆ ಪ್ರವೇಶಕ್ಕೆ ಅವಕಾಶ ನೀಡಬಾರದು. ಹಂದಿ ಆಹಾರ, ಇತರೆ ಸಾಮಗ್ರಿಗಳನ್ನು ಫಾರಂಗೆ ಸಾಗಿಸುವ ವಾಹನಗಳನ್ನು ಸೋಂಕು ನಿವಾರಕ ದ್ರಾವಣದಿಂದ ಶುಚಿಗೊಳಿಸಬೇಕು. ಹಂದಿ ಫಾರಂನ ಕೆಲಸಗಾರರು ಬೇರೆ ಫಾರಂಗೆ ಹೋಗಬಾರದೆಂದು ಸ್ಪಷ್ಟ ನಿರ್ದೇಶನವನ್ನು ನೀಡಲಾಗಿದೆ.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗಾವಹಿಸಿ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡಿ ಆಫ್ರಿಕನ್ ಹಂದಿ ಜ್ವರದ ಹತೋಟಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ದಂಡಾಧಿಕಾರಿಗಳು ಸೂಚಿಸಿದ್ದಾರೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…