ಮೈಸೂರು : ಕಳೆದ ಎರಡು ದಿನಗಳ ಹಿಂದೆಯಷ್ಟೇ ನಂಜನಗೂಡು ಮತ್ತು ಹೆಚ್.ಡಿ.ಕೋಟೆ ತಾಲೂಕಿನ ಸುತ್ತ ಕಾಣಿಸಿಕೊಂಡಿದ್ದ ನರಭಕ್ಷಕ ಹುಲಿಯನ್ನು ಹಿಡಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಲಿಯ ಓಡಾಟದಿಂದ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ದೀಗ ಮೈಸೂರು ವ್ಯಾಪ್ತಿಗೆ ಸೇರಿದ ಗ್ರಾಮಗಳ ಸುತ್ತಾ-ಮುತ್ತ ಹುಲಿಯೊಂದು ಕಾಣಿಸಿಕೊಂಡಿದೆ.
ಮೈಸೂರಿನ ಚಿಕ್ಕಕಾನ್ಯ, ದೊಡ್ಡಕಾನ್ಯ, ಬ್ಯಾತಹಳ್ಳಿ, ಸಿಂಧುವಳ್ಳಿ, ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮದ ಜನತೆಯ ನಿದ್ದೆಗೆಡಿಸಿದೆ. ಗ್ರಾಮದ ಸುತ್ತಾ-ಮುತ್ತ ಎಲ್ಲಾದರೂ ಹುಲಿ ಕಾಣಿಸಿಕೊಂಡಲ್ಲಿ ತಕ್ಷಣ ಅರಣ್ಯ ಇಲಾಕೆಗೆ ಮಾಹಿತಿ ನೀಡುವಂತೆ ಅರಣ್ಯಾಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದಾರೆ.
ಮೂರು ಹುಲಿಗಳ ದರ್ಶನ:
ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರು ಕೆಲಸ ಮುಗಿಸಿಕೊಂಡು ಹೋಗುವ ಸಂದರ್ಭದಲ್ಲಿ ಹುಲಿ ಕಾಣಿಸಿಕೊಂಡಿದೆ. ತಾಂಡ್ಯಾ ಹಾಗೂ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ, ರಾತ್ರಿ ಪಾಳಿಯ ಕೆಲಸ ಮುಗಿಸಿ ಹೋಗುವಾಗ ಹುಲಿ ಪ್ರತ್ಯಕ್ಷವಾಗಿದೆ. ಆದರೇ ಕೆಲವು ಕಾರ್ಮಿಕರು ಹೇಳುವ ಪ್ರಕಾರ ರಾತ್ರಿ ಒಟ್ಟು ಮೂರು ಹುಲಿಗಳು ಕಾಣಿಸಿಕೊಂಡಿತ್ತು ಎನ್ನುತ್ತಾರೆ. ಇದೀಗ ಹುಲಿ ಕಾಣಿಸಿಕೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಅರಣ್ಯಾಧಿಕಾರಿಗಳು ಹುಲಿಯ ಜಾಡನ್ನು ಹಿಡಿದು ಸೆರೆ ಹಿಡಿಯಲು ಮುಂದಾಗಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…