Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಎರಡು ದಿನ ಕಾದು ನಾನೇ ತೆರವುಗೊಳಿಸುವೆ : ಸಂಸದ ಸಿಂಹ

ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ ತೆಗೆದುಕೊಂಡು ಇಲ್ಲ. ಸಾರ್ವಜನಿಕರ ಹಿತಾಸಕ್ತಿ ಅಂತ ಸುಮ್ಮನಿದ್ದೇವೆ.‌ಈ ರೀತಿಯ ಗುಂಬಜ್ ಮಾದರಿ ನಿಲ್ದಾಣವನ್ನು ಕಟ್ಟಿದ್ದನ್ನು ನೋಡಿಕೊಂಡು ಸುಮ್ಮನಿರಲ್ಲ ಎಂದು ಹೇಳಿದರು.

ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಇನ್ನೂ ಎರಡು ದಿನ ಬಾಕಿ ಇದೆ. ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ನಾನು ಹೇಳಿದಂತೆ ನಾನೇ ತೆರವು ಮಾಡುತ್ತೇನೆ. ಆದರೆ,  ಬಸ್ ಸ್ಟ್ಯಾಂಡ್ ತೆರವು ಮಾಡವುದಿಲ್ಲ. ಬಸ್ ಸ್ಟ್ಯಾಂಡ್ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು. ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್ ಗೂ ವ್ಯತ್ಯಾಸ ಇಲ್ವಾ? ಅರಮನೆ ಗೋಪುರಕ್ಕೂ ಗುಂಬಜ್ ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ ಎಂದು ಗುಡುಗಿದರು.

ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ. ಗುಂಬಜ್ ಕಟ್ಟಿದ್ದು ಪ್ರಶ್ನಿಸದಿದ್ದರೆ ಅರ್ಧ ಚಂದ್ರವನ್ನು ಕಟ್ಟಿ ಬಿಡುತ್ತಿದ್ದರು. ಬಸ್ ಸ್ಟ್ಯಾಂಡ್ ಕಟ್ಟಿದ ಗುತ್ತಿಗೆದಾರ ತನ್ನ ಮೇಲೆ ಬೇಕಾದರೆ ಗುಂಬಜ್, ಮಿನಾರ್ ಕಟ್ಟಿ ಕೊಳ್ಳಲಿ.
ಶಾಸಕ ರಾಮದಾಸ್ ಅವರು ಅರಮನೆ ಮಾದರಿಯಲ್ಲಿ 20 ಬಸ್ ಸ್ಟ್ಯಾಂಡ್ ಕಟ್ಟಲಿ. ನಾನು ಗುಂಬಜ್ ಬಗ್ಗೆ ಧ್ವನಿ ಎತ್ತಿದ್ದಕ್ಕೆ ರಾಮದಾಸ್ ಅವರು ಮೌನವಹಿಸಿದ್ದಾರೆ ಎಂದರೆ ಅದರ ಅರ್ಥ ನನ್ನ ಮಾತಿಗೆ ಅವರ ಸಮ್ಮತಿ ಇದೆ ಅಂತ ಅರ್ಥ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ