Mysore
28
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗು ಬೆಳೆ ವಿಚಾರ ಸಂಕಿರಣ

ಚಾಮರಾಜನಗರ: ಸಮೀಪದ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗು ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಬ್ಲಾಕ್ ಮಟ್ಟದ ವಿಚಾರ ಸಂಕಿರಣ ನಡೆಯಿತು.
ತೆಂಗು ಅಭಿವೃದ್ಧಿ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಐಸಿಎಆರ್ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ತೆಂಗು ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಇ. ಅರವಾಳಿ ಉದ್ಘಾಟಿಸಿದರು.
ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ರೈತರಿಗೆ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅರವಾಳಿ ಸಲಹೆ ಮಾಡಿದರು.
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿಶೇಷಾಧಿಕಾರಿ ಡಾ. ಸಿ. ದೊರೆಸ್ವಾಮಿ ಅವರು ತೆಂಗಿನಲ್ಲಿ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.
ಸಹಾಯಕ ಪ್ರಾಧ್ಯಾಪಕ  ಡಾ. ಆರ್.ಸಿದ್ದಪ್ಪ, ತೋಟಗಾರಿಕಾ ವಿಜ್ಞಾನಿ ಡಾ. ಮೋಹನ್‌ಕುಮಾರ್, ಕೃಷಿ ವಿಸ್ತರಣೆ ವಿಜ್ಞಾನಿ ಎನ್.ಎಸ್.ಸುಪ್ರಿಯಾ, ಡಾ. ಉಮಾಶಂಕರ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ