ಚಾಮರಾಜನಗರ: ಸಮೀಪದ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೆಂಗು ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಬ್ಲಾಕ್ ಮಟ್ಟದ ವಿಚಾರ ಸಂಕಿರಣ ನಡೆಯಿತು.
ತೆಂಗು ಅಭಿವೃದ್ಧಿ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಐಸಿಎಆರ್ ವಿಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ತೆಂಗು ಅಭಿವೃದ್ಧಿ ಮಂಡಳಿಯ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಇ. ಅರವಾಳಿ ಉದ್ಘಾಟಿಸಿದರು.
ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ರೈತರಿಗೆ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅರವಾಳಿ ಸಲಹೆ ಮಾಡಿದರು.
ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿಶೇಷಾಧಿಕಾರಿ ಡಾ. ಸಿ. ದೊರೆಸ್ವಾಮಿ ಅವರು ತೆಂಗಿನಲ್ಲಿ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.
ಸಹಾಯಕ ಪ್ರಾಧ್ಯಾಪಕ ಡಾ. ಆರ್.ಸಿದ್ದಪ್ಪ, ತೋಟಗಾರಿಕಾ ವಿಜ್ಞಾನಿ ಡಾ. ಮೋಹನ್‌ಕುಮಾರ್, ಕೃಷಿ ವಿಸ್ತರಣೆ ವಿಜ್ಞಾನಿ ಎನ್.ಎಸ್.ಸುಪ್ರಿಯಾ, ಡಾ. ಉಮಾಶಂಕರ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…