ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು.
ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದರು.
ಕೃಷಿಯಲ್ಲಿ ನಿಯಮಿತ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಹೆಚ್ಚುವರಿ ಇಳುವರಿ ಪಡೆಯುವ ವಿಧಾನವನ್ನು ಉತ್ತೇಜಿಸುವ ಸಲುವಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಭೂಮಿಯನ್ನು ನೀರಾವರಿ ವ್ಯವಸ್ಥೆಗೆ ಒಳಪಡುವಂತೆ ಮಾಡುವುದು ಹಾಗೂ ಕೃಷಿಯಲ್ಲಿ ನೀರಾವರಿ ತಗಲುವ ವೆಚ್ಚವನ್ನು ಕನಿಷ್ಟಗೊಳಿಸುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಇದರ ಜತೆಗೆ ಕೃಷಿಗೆ ಪೂರಕವಾದ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸಬಹುದಾಗಿದೆ. ಈ ಯೋಜನೆಯಡಿ ತಾಲೂಕಿನ ಕೌದಳ್ಳಿ, ಕುರಟ್ಟಿ ಹೊಸೂರು, ಅಜ್ಜೀಪುರ, ಶೆಟ್ಟಳ್ಳಿ ಹಾಗೂ ದೊಡ್ಡಲತ್ತೂರು ಗ್ರಾಮಗಳು ಆಯ್ಕೆಯಾಗಿದ್ದು, ಆರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಲಾಗುತ್ತಿದೆ. ಅಲ್ಲದೇ ಈ ಯೋಜನೆಯಡಿ ಇನ್ನು ಹಲವು ಸವಲತ್ತುಗಳು ದೊರಕಲಿದೆ. ಅದ್ದರಿಂದ ರೈತರು ಇದರ ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ದಿ ಹೊಂದಬೇಕು ಎಂದು ತಿಳಿಸಿದರು.
ಈ ವೇಳೆ 50 ಫಲಾನುಭವಿಗಳಿಗೆ ಜಾನುವಾರು ನೆಲಹಾಸು, 30 ಫಲಾನುಭವಿಗಳಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಒಬ್ಬರಿಗೆ ಜೇನು ಸಾಕಾಣೆ ಪೆಟ್ಟಿಗೆಯನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಂದರಮ್ಮ, ಕೃಷಿ ಅಧಿಕಾರಿಗಳಾದ ರಘುವೀರ್, ವೆಂಕಟನಾಯ್ಕ, ಮುಖಂಡರಾದ ಮೆಹಬೂಬ್, ರಾಜಣ್ಣ ಹಾಗೂ ಇನ್ನಿತರರು ಇದ್ದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…