ಜಿಲ್ಲೆಗಳು

ಸಹಜ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ʼಜೀವ ಜಗತ್ತುʼ ಪುಸ್ತಕ ಬಿಡುಗಡೆ

ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್’ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ ಹಾಗೂ ಸಹಜ ಕೃಷಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗಿಡಕ್ಕೆ ನೀರೆರೆದು, ಜೀವ ಜಗತ್ತು ಪುಸ್ತಕವನು ಬಿಡುಗಡೆಗೊಳಿಸುವ ಮೂಲಕ ಕಾರ್ಯಕ್ರಮವನ್ನು ಸಾಹಿತಿ, ಹಿರಿಯ ಪತ್ರಕರ್ತತು ಹಾಗೂ ಕನ್ನಡ ಪ್ರಭ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಅಂಶಿ ಪ್ರಸನ್ನಕುಮಾರ್‌ ಅವರು ಉದ್ಘಾಟಿಸಿ ಕಾರ್ಯಕ್ರಮದ ಕುರಿತು ಮಾತನಾಡಿದರು.
ನಂತರದಲ್ಲಿ ಕೆವಿಕೆ ಕೃಷಿ ವಿಜ್ಞಾನಿ ಡ.| ಯೋಗೀಶ್ ಜಿ ಎಸ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೇವರಾಜು ಕಪ್ಪಸೋಗೆ, ಜೆ ಎಸ್ ಬಿ ಪ್ರತಿಷ್ಠಾನದ ಅಧ್ಯಕ್ಷ ಶಶಿಕುಮಾರ್ ಎಸ್ ಮಾತನಾಡಿದರು.
ಬಳಿಕ ಕಾರ್ಯಕ್ರಮದಲ್ಲಿ ಹಾಜರಿದ್ದ ರೈತರಿಗೆ ಸಹಜ ಕೃಷಿ ಬಗ್ಗೆ ಸಹಜ ಕೃಷಿ ವಿಜ್ಞಾನಿ ಡಾ.ಮಂಜುನಾಥ ರವರು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಯ ರೈತರುಗಳು, ರೈತ ಮುಖಂಡರು, ಸ್ವದೇಶಿ ಆಂದೋಲನ ಚಳುವಳಿ ಸಂಚಾಲಕರಾದ ಮಾಧವನ್, ರೈತ ಸಾಹಿತಿ ಪ್ರಶಾಂತ ಜಯರಾಂ, ಚಿಂತಕರಾದ ಕೋಟಂಬಳ್ಳಿ ಗುರುಸ್ವಾಮಿ, ಯುವ ರೈತರಾದ ಶಿವಕುಮಾರ, ಮುಡಿಗುಂಡ ಪ್ರಸಾದ್, ಮಧುಕರ, ತೇರಂಬಳ್ಳಿ ಕುಮಾರ, ಕೃಷಿ ವಿಜ್ಞಾನಿಗಳಾದ ಶೃತಿ, ರಜತ್, ಆದರ್ಶ ಮತ್ತು ಕೆವಿಕೆ ಸಿಬ್ಬಂದಿಗಳು, ಮತ್ತಿತರರು ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago