ಜಿಲ್ಲೆಗಳು

ಹುಲಿ ಸೆರೆಗಾಗಿ ಅಹೋರಾತ್ರಿ ಧರಣಿ

ಅಂತರಸಂತೆ: ಕಾಡಿಗೆ ಸೌದೆ ತರಲು ತೆರಳಿದ್ದ ಮಂಜು ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಹುಲಿಯನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ಕಚೇರಿ ಎದುರು ಹಾಡಿಯ ಜನರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(17) ಎಂಬ ಯುವಕನು ಜ.22ರಂದು ಕಾಡಿಗೆ ಸೌದೆ ತರಲು ತೆರಳಿದ್ದ ವೇಳೆ ಹಾಡಿಯ ಸಮೀಪ ಹುಲಿಯೊಂದು ಆತನ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಬಳಿಕ ಹಾಡಿಯ ಜನರು ಹುಲಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರು.

ಹುಲಿ ದಾಳಿಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ಅರಣ್ಯಾಧಿಕಾರಿಗಳು ಭರವಸೆಯನ್ನು ನೀಡಿದ್ದ ಮೇರೆಗೆ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಆದರೆ ಇದೀಗ ಮತ್ತೇ ಎರಡು ದಿನಗಳ ಹಿಂದೆ ಹಾಡಿಯ ಸಮೀಪವೇ ಹುಲಿಯೊಂದು ಹಸುವನ್ನು ಕೊಂದ ಹಾಕಿದ್ದು, ಭಯಭೀತರಾದ ಹಾಡಿಯ ಜನರು, ಹುಲಿಯನ್ನು ಸ್ಥಳಾಂತರಿಸುವವರೆಗೂ ಧರಣಿ ಮುಂದುವರಿಸಲಾಗುವುದು ಎಂದು ಪಟ್ಟ ಹಿಡಿದು ಅರಣ್ಯ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ಆರಂಭಿಸಿದ್ದಾರೆ.

ರಮೇಶ್, ವಡ್ಡರಗುಡಿ ಚಿಕ್ಕಣ್ಣ, ಅಯ್ಯಪ್ಪ, ಗಂಗೆ, ಮಾಸ್ತಿ, ಟಿ.ಸಿ.ಸುರೇಶ್, ಚಂದ್ರು, ನಾಗರಾಜು, ಮಹದೇವ, ಕೂಸಣ್ಣ ಸೇರಿದಂತೆ ಹಾಡಿ ಅರಣ್ಯ ಹಕ್ಕು ಸಮಿತಿ ಸದಸ್ಯರು, ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

andolanait

Recent Posts

ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಮದುವೆಯ ಫೋಟೋಗಳು ವೈರಲ್‌

ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…

13 mins ago

ರೈಲ್ವೆ ಹುದ್ದೆ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ: ಸಚಿವ ವಿ.ಸೋಮಣ್ಣ

ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…

33 mins ago

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ: ಡ್ರೋನ್‌ ಪ್ರತಾಪ್‌ಗೆ ಜಾಮೀನು ಮಂಜೂರು

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್‌ ಪ್ರತಾಪ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…

51 mins ago

9 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…

2 hours ago

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್‌ ಅವರು ನಾಡಿನ…

2 hours ago

5 ಹಾಗೂ 8ನೇ ತರಗತಿ ಪರೀಕ್ಷೆಗೆ ಮಹತ್ವದ ತೀರ್ಮಾನ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…

2 hours ago