ಅಂತರಸಂತೆ: ಕಾಡಿಗೆ ಸೌದೆ ತರಲು ತೆರಳಿದ್ದ ಮಂಜು ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಹುಲಿಯನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ಕಚೇರಿ ಎದುರು ಹಾಡಿಯ ಜನರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(17) ಎಂಬ ಯುವಕನು ಜ.22ರಂದು ಕಾಡಿಗೆ ಸೌದೆ ತರಲು ತೆರಳಿದ್ದ ವೇಳೆ ಹಾಡಿಯ ಸಮೀಪ ಹುಲಿಯೊಂದು ಆತನ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಬಳಿಕ ಹಾಡಿಯ ಜನರು ಹುಲಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದರು.
ಹುಲಿ ದಾಳಿಯಾಗದಂತೆ ಎಚ್ಚರ ವಹಿಸುತ್ತೇವೆ ಎಂದು ಅರಣ್ಯಾಧಿಕಾರಿಗಳು ಭರವಸೆಯನ್ನು ನೀಡಿದ್ದ ಮೇರೆಗೆ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಆದರೆ ಇದೀಗ ಮತ್ತೇ ಎರಡು ದಿನಗಳ ಹಿಂದೆ ಹಾಡಿಯ ಸಮೀಪವೇ ಹುಲಿಯೊಂದು ಹಸುವನ್ನು ಕೊಂದ ಹಾಕಿದ್ದು, ಭಯಭೀತರಾದ ಹಾಡಿಯ ಜನರು, ಹುಲಿಯನ್ನು ಸ್ಥಳಾಂತರಿಸುವವರೆಗೂ ಧರಣಿ ಮುಂದುವರಿಸಲಾಗುವುದು ಎಂದು ಪಟ್ಟ ಹಿಡಿದು ಅರಣ್ಯ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ಆರಂಭಿಸಿದ್ದಾರೆ.
ರಮೇಶ್, ವಡ್ಡರಗುಡಿ ಚಿಕ್ಕಣ್ಣ, ಅಯ್ಯಪ್ಪ, ಗಂಗೆ, ಮಾಸ್ತಿ, ಟಿ.ಸಿ.ಸುರೇಶ್, ಚಂದ್ರು, ನಾಗರಾಜು, ಮಹದೇವ, ಕೂಸಣ್ಣ ಸೇರಿದಂತೆ ಹಾಡಿ ಅರಣ್ಯ ಹಕ್ಕು ಸಮಿತಿ ಸದಸ್ಯರು, ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…