ಮೈಸೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್‌ಗೆ ಸ್ವಮೂತ್ರ ಪಾನವೇ ಮದ್ದು ಎಂದು ದಾಖಲಾಗಿದ್ದು, ಇದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಸುಭಾಷ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂತ್ರ ಚಿಕಿತ್ಸೆಯ ಪ್ರಕೃತಿ ಚಿಕಿತ್ಸೆಯು ಒಂದು ಭಾಗ. ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ. ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೇ ಹೊರತು, ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಿರುವುದನ್ನು ಈ ಕೂಡಲೇ ವಾಪಸ್ ಪಡೆಯಬೇಕು. ಈ ಕೂಡಲೇ ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಹಾಗೂ ಸರ್ಕಾರವೇ ಮಧ್ಯ ಪ್ರವೇಶಿಸಿ ಅವೈಜ್ಞಾನಿಕ ಪಠ್ಯಕ್ರಮವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಐಡಿಎಸ್‌ಓ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…