ಡಿಸೆಂಬರ್ 4ರಂದು ನಡೆದಿದ್ದ ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಹುತಾತ್ಮನಾಗಿದ್ದ ದಸರಾ ಆನೆ ಅರ್ಜುನನ ಸಾವಿನ ಸುತ್ತ ಅನುಮಾನಗಳ ಹುತ್ತ ನಿರ್ಮಾಣಗೊಂಡಿತ್ತು. ಈ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದರು.
ಅದರಂತೆ ಇಂದು ( ಡಿಸೆಂಬರ್ 21 ) ಬೆಂಗಳೂರಿನಿಂದ ನಿವೃತ್ತ ಮುಖ್ಯ ವನ್ಯಪಾಲಕ ಅಜಯ್ ಮಿಶ್ರಾ ನೇತೃತ್ವದ ತನಿಖಾ ತಂಡ ಆಗಮಿಸಿದ್ದು ತನಿಖೆಯನ್ನು ಆರಂಭಿಸಿದೆ. ಮೊದಲಿಗೆ ಅರ್ಜುನ ಹುತಾತ್ಮನಾದ ಹಾಸನದ ಸಕಲೇಶಪುರ ತಾಲೂಕಿನ ಯಸಳೂರು ವಲಯದ ದಬ್ಬಳ್ಳಿ ಕಟ್ಟೆ ಅರಣ್ಯ ಪ್ರದೇಶದ ಜಾಗಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದೆ.
ಕಾರ್ಯಾಚರಣೆ ವೇಳೆ ಅರ್ಜುನ ಆನೆ ಕಾಲಿಗೆ ಗುಂಡೇಟು ಬಿದ್ದು ಸಾವನ್ನಪ್ಪಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾವುತ ವಿನು ಹಾಗೂ ಜನತೆ ಅರ್ಜುನನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…