Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಅಲಗುಮೂಲೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿ

ಹನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ತಹಸಿಲ್ದಾರ್ ಆನಂದಯ್ಯ ರವರು ಸಲಹೆ ನೀಡಿದರು.

ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕಚೇರಿಗೆ ಅಲೆಯುವ ಬದಲಾಗಿ ಅಧಿಕಾರಿಗಳೇ ನಿಮ್ಮ ಗ್ರಾಮದ ಕಡೆಗೆ ಬಂದು ಜನರ ಕುಂದು ಕೊರತೆಗಳನ್ನು ಆಲಿಸಿ, ಬಗೆಹರಿಸುವ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಗ್ರಾಮೀಣ ಜನರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಜೊತೆಗೆ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಅಹವಾಲುಗಳನ್ನು ನೀಡಿ. ಸಾಧ್ಯವಾದರೆ ಅದನ್ನು ಇಲ್ಲೇ ಬಗೆಹರಿಸಲಾಗುವುದು. ಇಲ್ಲವಾದರೆ ಕಚೇರಿ ಹಂತದಲ್ಲಿ ಬಗೆಹರಿಸಲು ಒತ್ತು ನೀಡಲಾಗುವುದು. ಅದಕ್ಕಾಗಿಯೇ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಒಟ್ಟು 33 ಅರ್ಜಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಅವುಗಳಲ್ಲಿ ಕಂದಾಯ ಇಲಾಖೆಯ 27, ಪಂಚಾಯತ್ ರಾಜ್ ಇಲಾಖೆ, ಸಹಕಾರಿ ಇಲಾಖೆ, ಸಾರಿಗೆ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಇಬಿ ಮತ್ತು ಅರಣ್ಯ ಇಲಾಖೆಗಳಿಗೆ ಸಂಬಂಧಿಸಿದ ತಲಾ ಒಂದು ಅರ್ಜಿಗಳು ಸ್ವೀಕೃತವಾದವು.

ಈ ಸಂದರ್ಭದಲ್ಲಿ ಮಣಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಪ್ರಭುಸ್ವಾಮಿ, ಪರಿಶಿಷ್ಟ ವರ್ಗಗಳ ಇಲಾಖೆಯ ನವೀನ್ ಮಠದ್, ಕೃಷಿ ಅಧಿಕಾರಿ ರಘುವೀರ್. ತಾಲ್ಲೂಕು ಪಂಚಾಯತಿ ಅಭಿಯಂತರ ಸಿದ್ದಪ್ಪಾಜಿಗೌಡ,ಆರ್ ಐ ಮಹದೇವಸ್ವಾಮಿ ಗ್ರಾಮಲೆಕ್ಕಿಗ ಶೇಷಣ್ಣ, ಪಿಡಿಒ ನಾಗರಾಜ್ ಮೂರ್ತಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ