ಜಿಲ್ಲೆಗಳು

ಫೆ.೬ ರಿಂದ ೬ ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ!

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದಲ್ಲಿ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳ ಅನಾವರಣಗೊಳ್ಳಲಿದೆ ಎಂದು ತಿಳಿಸಿದರು.

ಫೆ.6ಕ್ಕೆ ಕೊಂಡೋತ್ಸವ, 7ಕ್ಕೆ ಸಾಮೂಹಿಕ ವಿವಾಹ, 8ಕ್ಕೆ ರಥೋತ್ಸವ, 9ಕ್ಕೆ ಲಕ್ಷ ದೀಪೋತ್ಸವ, 10ಕ್ಕೆ ತೆಪ್ಪೋತ್ಸವ, 11ರಂದು ಅನ್ನ ಬ್ರಹ್ಮೋತ್ಸವದ ಮೂಲಕ ಮುಕ್ತಾಯಗೊಳ್ಳಲಿದೆ.

ಈ ಆರು ದಿನಗಳು ಭಜನೆ, ರಂಗೋಲಿ, ಚಿತ್ರಕಲೆ, ಗಾಳಿಪಟ, ಚಿತ್ರಸಂತೆ, ಕುಸ್ತಿ, ದನಗಳ ಜಾತ್ರೆ, ಕಪಿಲಾರತಿ, ದೋಣಿ ವಿಹಾರ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ಇನ್ನೂ, ಸುತ್ತೂರು ಜಾತ್ರೆಗೆ ಸುಮಾರು 25 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲು ಗೋದಾಮಿನಲ್ಲಿ ದಿನಸಿ ಪದಾರ್ಥಗಳ ಶೇಖರಣೆ ಮಾಡಲಾಗಿದೆ. 1000 ಕ್ವಿಂಟಾಲ್ ಅಕ್ಕಿ, 180 ಕ್ವಿಂಟಾಲ್ ತೊಗರಿಬೇಳೆ, 1500 ಕ್ಯಾನ್ ಅಡುಗೆ ಎಣ್ಣೆ, 12 ಟನ್ ಬೆಲ್ಲ, 4000 ಕೆಜಿ ಖಾರದಪುಡಿ, 250 ಕ್ವಿಂಟಾಲ್ ಸಕ್ಕರೆ, 500 ಕೆ.ಜಿ. ನಂದಿನಿ ತುಪ್ಪ, 8000 ಲೀ. ಹಾಲು, 28,000 ಲೀ. ಮೊಸರು, 5000 ಕೆ.ಜಿ. ಉಪ್ಪಿನಕಾಯಿ ಸಿದ್ದಗೊಂಡಿದೆ ಎಂದು ತಿಳಿಸಿದರು.

ಕೃಷಿ ಜಾತ್ರೆಗೆ ಮುಂದಾದ ಸುತ್ತೂರು ಮಠ : ಸುತ್ತೂರು ಜಾತ್ರೆಯಲ್ಲಿ ಈ ಬಾರಿ ಕೃಷಿ ಬ್ರಹ್ಮಾಂಡ ಮುಖ್ಯ ಆರರ್ಷಣೆಯಾಗಿದೆ. ಒಂದು ಎಕರೆ ಜಾಗದಲ್ಲಿ 150 ಬೆಳೆ ಬೆಳೆದಿದ್ದಾರೆ. ಪ್ರತಿ ವರ್ಷದಂತೆ ಈ ಭಾರಿಯು ಸಹ ಕೃಷಿ ಮೇಳ ಆಯೋಜನೆ ಮಾಡಲಾಗಿದೆ. ಕೃಷಿ ಮೇಳದಲ್ಲಿ ವಿವಿಧ ಬಗೆಯ ಹೂ, ತರಕಾರಿ, ಸಸ್ಯಕಾಶಿ ಪ್ರದರ್ಶನ ಇರಲಿದೆ. ಕೃಷಿ ಮೇಳವು ದೇಸಿ ಸೊಗಡಿನ ಮಾದರಿಯಲ್ಲಿ ನಿರ್ಮಾಣಗೊಂಡಿದೆ.

ಅಮಿತ್‌ ಶಾ ಅವರಿಂದ ಅತಿಥಿ ಗೃಹ ಉದ್ಘಾಟಣೆ : ಫೆ.೧೦ ರಂದು ಶ್ರೀಮತಿ ಪಾರ್ವತಮ್ಮ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago