ಜಿಲ್ಲೆಗಳು

ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು.

ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ನಾಳೆ ಸಂಜೆ ಜಂಬೂಸವಾರಿ ಸಾಗಲಿದೆ, ಇದರ ಜೊತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಹೇಳಿದರು.

ಬಂದೋಬಸ್ತ್ ಗಾಗಿ ಸುಮಾರು 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಪಾಸ್ ವಿತರಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಷ್ಟು ಸ್ಥಳಾವಕಾಶ ಇದೆಯೋ ಅಷ್ಟು ವ್ಯವಸ್ಥೆ ಮಾಡಲಾಗಿದೆ. ದಸರಾ ಎಂದರೆ ಕೇವಲ ಪಾಸ್ ಅಲ್ಲ. ಒಂದು ವಾರಗಳ ನಡೆದ ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಕುಸ್ತಿ ಇದ್ಯಾವುದಕ್ಕೂ ಪಾಸ್ ಇರಲಿಲ್ಲ. 15-20 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.

ದಸರಾ ಉಪಸಮಿತಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪ್ಪು ನಮನ, ಯುವ ದಸರಾ, ರೈತ ದಸರಾ, ಕವಿಗೋಷ್ಠಿ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಮಹಾರಾಣಿ ಅವರು ಕೂಡ ಎಲ್ಲಾ ರೀತಿಯ ಸಹಕಾರ ನೀಡಿದರು. ಅಧಿಕಾರಿಗಳು, ಮೈಸೂರು ಜನತೆಯ ಸಂಪೂರ್ಣ ಸಹಕಾರದಿಂದ ಎಲ್ಲವೂ ಸುಸೂತ್ರವಾಗಿ ಸಾಗಿದೆ ಎಂದು ಹೇಳಿದರು.

andolana

Recent Posts

ಅಯ್ಯಪ್ಪ ಭಕ್ತರಿಗೆ ಅನುಕೂಲ: ವಿಮಾನದ ಕ್ಯಾಬಿನ್‌ನಲ್ಲಿ ಇರುಮುಡಿ ಸಾಗಿಸಲು ಅನುಮತಿ!

ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್‌ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…

5 hours ago

ನನ್ನ ಸಲಹೆ ಪಾಲಿಸಿ ಹಣ ಉಳಿಸಿದ್ದೇವೆ ಎನ್ನುತ್ತಿದ್ದಾರೆ ಜನ: ಚಿನ್ನದ ಬೆಲೆ ಬಗ್ಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…

6 hours ago

ಮಹಾತ್ಮರಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ಬೇಕು: ಪ್ರತಾಪ್‌ ಸಿಂಹ

ಮೈಸೂರು: ರವಿ ಹಂಜ್‌ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…

6 hours ago

ಗುಜರಾತ್‌ನಲ್ಲಿ ಕಾರು–ಲಾರಿ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಾವು!

ಗುಜರಾತ್‌: ಇಲ್ಲಿನ ಕಚ್‌ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…

6 hours ago

ಹನೂರು ೭ನೇ ವಾರ್ಡ್‌ನಲ್ಲಿ ಮೂಲಸೌಲಭ್ಯ ಮರೀಚಿಕೆ

ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…

9 hours ago

ಸರ್ಕಾರಿ ದಸರಾ ‘ನಮ್ಮ ದಸರಾ’ ಆಗಲಿ

ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…

9 hours ago