ಜಿಲ್ಲೆಗಳು

ಪ್ರತಿ ತಾಲ್ಲೂಕಿನಲ್ಲಿ ರೈತ ದಸರಾ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಅವರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ರೈತ ದಸರಾಗೆ ಚಾಲನೆ ನೀಡಿದರು.

ನಂದಿ ಪೂಜೆ ನೆರವೇರಿಸಿ, ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ಸೋಮಶೇಖರ್ ಅವರು, ಪ್ರತಿ ತಾಲೂಕಿನಲ್ಲಿ ರೈತ ದಸರಾ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿಕರ ಬಗ್ಗೆ ಸಾಕಷ್ಟು ಕಾಳಜಿ ಹೊಂದಿರುವ ಸಚಿವ ಬಿ‌.ಸಿ.ಪಾಟೀಲ್ ಅವರು, ರೈತರೊಂದಿಗೆ ಒಂದು ದಿನ ಕಾರ್ಯಕ್ರಮದ ಮೂಲಕ ರೈತರ ಕಷ್ಟಸುಖಗಳನ್ನು ಆಲಿಸುವುದರ ಜೊತೆಗೆ ರೈತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ ಎಂದರು.

ನಂತರ ಸಚಿವರು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಪೂರ್ಣಕುಂಭ, ಗಿರಿಜನ ನೃತ್ಯ, ಕೀಲುಗೊಂಬೆ
ಮಂಗಳವಾದ್ಯ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಭವ್ಯ ಮೆರವಣಿಗೆಯಲ್ಲಿ ಸಾಗಿದವು.

ಶಾಸಕರಾದ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಳಸಂತೆಯಲ್ಲಿ ಗೋಲ್ಡ್ ಕಾರ್ಡ್ ಮಾರಾಟ ಮಾಡುವವರ ವಿರುದ್ಧ ಕ್ರಮ

ಕಾಳಸಂತೆಯಲ್ಲಿ ಗೋಲ್ಡ್ ಕಾರ್ಡ್ ಮಾರಾಟದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳುವುದಾಗಿ ಪ್ರಕಟಣೆ ಹೊರಡಿಸಿದ್ದಾರೆ. ಆನ್ ಲೈನ್ ಮತ್ತು ಆಪ್ ಲೈನ್ ಬಿಡಲಾಗಿತ್ತು. ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದರು.

andolanait

Recent Posts

ಮಹಾರಾಷ್ಟ್ರ : ಬಿಜೆಪಿಗೆ ಪ್ರತಿಷ್ಠೆಯ ಚುನಾವಣೆ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯ ಚುನಾವಣೆ. ಕಾಂಗ್ರೆಸ್ ಮತ್ತು ಬಿಜೆಪಿ ನೇತೃತ್ವದ…

23 mins ago

ನಿರ್ವಹಣೆ ಇಲ್ಲದ ಶೌಚಾಲಯ; ಇಲ್ಲಿ ಬಯಲೇ ಮೂತ್ರಾಲಯ

ವಾಣಿವಿಲಾಸ ಮಾರುಕಟ್ಟೆ ಒಳಗಿನ ಶೌಚಾಲಯದ ದುಸ್ಥಿತಿ; ಬಹುತೇಕ ಶೌಚಾಲಯಗಳಲ್ಲೂ ಇದೇ ಸ್ಥಿತಿ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ದೇಶದ…

52 mins ago

ಮುಡಾ: 50:50 ಅನುಪಾತದಡಿ 1950 ಬದಲಿ ನಿವೇಶನ

ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದಲ್ಲಿ ೫೦:೫೦ ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿ ರುವ ಹಗರಣ ಕುರಿತು…

1 hour ago

ಸರ್ಕಾರಿ ಶಾಲೆ ಬಾಲಕಿಯರಿಗೆ ಬಯಲೇ ಶೌಚಾಲಯ!

ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…

3 hours ago

ಕಾಡಿನಿಂದಲೂ ಕಾಣೆಯಾದ ಕಾಡುಪಾಪ

ಬಿ. ಆರ್. ಜೋಯಪ್ಪ ಕೊಡಗಿನಲ್ಲಿ ಸ್ಥಳೀಯರು ‘ಕಾಡುಪಾಪ’ವನ್ನು ‘ಚೀಂಗೆ ಕೋಳಿ’ ಎಂದು ಕರೆಯುತ್ತಾರೆ. ಇದೊಂದು ನಿಶಾಚರಿ, ನಿರುಪದ್ರವಿ ಕಾಡಿನ ಜೀವಿ.…

3 hours ago

ಹಸಿವಿನ ಆಳ ಮತ್ತು ಅನ್ನ ಎಂಬ ದೃಶ್ಯ ಕಾವ್ಯ…..

ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…

3 hours ago