ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸಿದ ಸಭೆಯ ಶಿಫಾರಸ್ಸಿನಿಂದ ರಾಜ್ಯ ಸರ್ಕಾರ ತನಿಖೆಗೆ ಆದೇಶವನ್ನು ಹೊರಡಿಸಲಾಗಿದ್ದು . ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಸ್ನೇಹಲ್ ಸುಧಾಕರ್ ಲೋಖಂಡೆ, ಮೈವಿವಿ ಕುಲಸಚಿವೆ ಶೈಲಜಾ ಮತ್ತು ಹಣಕಾಸು ಅಧಿಕಾರಿ ಡಾ.ಸಂಗೀತಾ ಗಜಾನನ ಭಟ್ ಸಮಿತಿಗೆ ವರದಿ ನೀಡಲು 1 ತಿಂಗಳ ಗಡುವನ್ನು ನೀಡಲಾಗಿದೆ.
ಈ ಹಿಂದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) 2019ರ ಡಿಸೆಂಬರ್ 19ರಂದು ನಡೆಸಿದ್ದ ಸಭೆಯಲ್ಲಿ ಮಾನ್ಯತೆ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಕರ್ನಾಟಕ ರಾಜ್ಯದ ಪರವಾಗಿ ಮೂರು ಕೆ- ಸೆಟ್ ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆ ನೀಡಲು ನಿರ್ಧರಿಸಿತ್ತು. 41 ವಿಷಯಗಳಲ್ಲಿ 2020 ಜನವರಿ 14ರಿಂದ ಮೂರು ವರ್ಷಗಳವರೆಗೆ ಪ್ರತಿ ವರ್ಷ ಒಂದು ಬಾರಿಗೆ ಕೆ- ಸೆಟ್ ಪರೀಕ್ಷೆಯನ್ನು ನಡೆಸಲು ಮಾನ್ಯತೆ ನೀಡಲಾಗಿತ್ತು.
ಆದರೆ, ಮೈಸೂರು ವಿಶ್ವವಿದ್ಯಾಲಯದಲ್ಲಿ ಜುಲೈ 2021ರಲ್ಲಿ ನಡೆದ ಕೆ- ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮತ್ತು ಈ ಪ್ರಕ್ರಿಯೆಗೆ ವಿವಿಯ ಕೆ- ಸೆಟ್ ಪರೀಕ್ಷೆಯ ಸಂಯೋಜಕರು ಹಾಗೂ ಇತತರು ಸಂಪೂರ್ಣ ಹೊಣೆಗಾರರೆಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…