ಹಾಸನ: ಜೈಲಿನೊಳಗೆ ಮೊಬೈಲ್ ಬಳಕೆ ಮಾಡುತ್ತಿರುವ ಆರೋಪ ಹಿನ್ನಲೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಎಎಸ್ಪಿ ತಮ್ಮಯ್ಯ, ಡಿವೈಎಸ್ಪಿ ಉದಯಭಾಸ್ಕರ್ ನೇತೃತ್ವದಲ್ಲಿ 80ಕ್ಕೂ ಹೆಚ್ಚು ಪೊಲೀಸರು ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ವಿಚಾರಣಾಧೀನ ಕೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಸೇವಿಸುತ್ತಿರುವ ಹಾಗೂ ಮೊಬೈಲ್ ಫೋನ್ಗಳ ಬಳಕೆ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನಲೆ ಈ ದಾಳಿ ನಡೆಸಲಾಗಿದೆ. ಈ ಹಿಂದೆ ಆರೋಪಿ ಕಿರಣ್ ಎಂಬಾತ ಜೈಲಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಹಿನ್ನಲೆ ರಾಮನಗರ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆದಿತ್ತು. ವಿವಿಧ ಹೂವುಗಳಿಂದ ಹ್ಯಾಪಿ ಬರ್ತಡೆ ಕಿರಣ್ ಅಣ್ಣ ಎಂದು ಬರೆಯಲಾಗಿದ್ದು, ದೊಡ್ಡದಾದ ಹಾರವನ್ನ ಹಾಕಿ ಆತನೊಂದಿಗೆ ಇತರ ಜೈದಿಗಳು ಪೋಸ್ ಕೊಟ್ಟಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.