ಜಿಲ್ಲೆಗಳು

ಜೈಲಿನೊಳಗೆ ಮೊಬೈಲ್ ಬಳಕೆ; ಹಾಸನ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಹಾಸನ: ಜೈಲಿನೊಳಗೆ ಮೊಬೈಲ್ ಬಳಕೆ ಮಾಡುತ್ತಿರುವ ಆರೋಪ ಹಿನ್ನಲೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಎಎಸ್​ಪಿ ತಮ್ಮಯ್ಯ, ಡಿವೈಎಸ್​ಪಿ ಉದಯಭಾಸ್ಕರ್​ ನೇತೃತ್ವದಲ್ಲಿ 80ಕ್ಕೂ ಹೆಚ್ಚು ಪೊಲೀಸರು ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ವಿಚಾರಣಾಧೀನ ಕೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ಸೇವಿಸುತ್ತಿರುವ ಹಾಗೂ ಮೊಬೈಲ್ ಫೋನ್​ಗಳ ಬಳಕೆ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನಲೆ ಈ ದಾಳಿ ನಡೆಸಲಾಗಿದೆ. ಈ ಹಿಂದೆ ಆರೋಪಿ‌ ಕಿರಣ್ ಎಂಬಾತ ಜೈಲಿನಲ್ಲಿ ‌ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಹಿನ್ನಲೆ ರಾಮನಗರ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆದಿತ್ತು. ವಿವಿಧ ಹೂವುಗಳಿಂದ ಹ್ಯಾಪಿ ಬರ್ತಡೆ ಕಿರಣ್​ ಅಣ್ಣ ಎಂದು ಬರೆಯಲಾಗಿದ್ದು, ದೊಡ್ಡದಾದ ಹಾರವನ್ನ ಹಾಕಿ ಆತನೊಂದಿಗೆ ಇತರ ಜೈದಿಗಳು ಪೋಸ್​ ಕೊಟ್ಟಿದ್ದರು.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

5 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

8 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

8 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

8 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

8 hours ago