Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

ನಾನು ಈಗ ಗುಣಮುಖ: ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ನಾನು ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ಇಂದಿನಿಂದ ಕ್ಷೇತ್ರದಲ್ಲಿ ಜನಸಾಮಾನ್ಯರ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ ೧೫ ದಿನಗಳ ಹಿಂದೆ ನಾನು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ನಡೆಸಿದ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಬೆನ್ನು ಮೂಳೆ ಮತ್ತು ನರದ ಸಮಸ್ಯೆ ಎದುರಾಗಿ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಈಗ ಗುಣಮುಖನಾಗಿದ್ದೇನೆ ಎಂದರು.

ಸೋಮವಾರದಿಂದ ಕ್ಷೇತ್ರದ ಎಚ್.ಮಟಕೆರೆ ಮತ್ತು ಕಣಿಯನಹುಂಡಿ ಹಾಗೂ ಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳ ಉದ್ಘಾಟನೆ, ರೈತರ ಮನೆ ಮನೆಗಳಿಗೆ ಸಾಗುವಳಿ ಪತ್ರ ವಿತರಣೆ ಹಾಗೂ ಅಧಿಕಾರಿಗಳ ಸಭೆ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!