ಮೈಸೂರು: ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ ಮತ್ತು ವಾಜಪೇಯಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ೫೦ ಮನೆಗಳ ಗುರಿ ನಿಗಧಿಪಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು,ಆಯ್ಕೆ ಮಾಡಲು ಮತ್ತು ಇತರೆ ದಾಖಲಾತಿಗಳನ್ನು ಸಲ್ಲಿಸಬೇಕಾಗಿರುವುದರಿಂದ ಅರ್ಜಿದಾರರು ತಮ್ಮ ನಿವೇಶನಗಳಿಗೆ ಸಂಬಂಧಿಸಿದ ಮೂಲ ದಾಖಲಾತಿಗಳನ್ನು ಪಟ್ಟಣ ಪಂಚಾಯಿತಿಗೆ ಸಲ್ಲಿಸುವಂತೆ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ನಗರ ವಸತಿ ಯೋಜನೆಯಡಿ ಎಸ್‌ಸಿ-೯, ಎಸ್ಟಿಗೆ-೩, ವಾಜಪೇಯಿ ನಗರ ವಸತಿ ಯೋಜನೆಯಡಿ ಅಲ್ಪಸಂಖ್ಯಾತರು-೫, ಸಾಮಾನ್ಯ ವರ್ಗದವರಿಗೆ ೩೩ ಮನೆಗಳನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.





