ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ.
ಚಾಲಕ ಮಲ್ಲೇಶ್ ಹರಸಾಹಸಪಟ್ಟು ಗರ್ಭಿಣಿಗೆ ಯಾವುದೇ ತೊಂದರೆಯಾಗದಂತೆ ನಿಧಾನವಾಗಿ ಕೌದಳ್ಳಿ ಆಸ್ಪತ್ರೆಗೆ ಕರೆತಂದಿದ್ದಾರೆ.
ಗ್ರಾಮಸ್ಥರ ಆಕ್ರೋಶ : ಚಂಗಡಿ ಗ್ರಾಮವು ಮಲೆಮಹದೇಶ್ವರ ವನ್ಯಧಾಮ ವಲಯ ವ್ಯಾಪ್ತಿಯಲ್ಲಿ ಬರುವುದರಿಂದ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ತೊಂದರೆಯಾಗುತ್ತಿದೆ .ಈ ಹಿನ್ನೆಲೆ ಚೆಂಗಡಿ ಸ್ಥಳಾಂತರ ಕಾರ್ಯವು ಸುಮಾರು 6 ವರ್ಷಗಳಿಂದ ನಡೆಯುತ್ತಿದೆ. ಈಗಾಗಲೇ ಹನೂರು ತಾಲ್ಲೂಕಿನ ವೈಶಂಪಾಳ್ಯ ಗ್ರಾಮದ ಸಮೀಪ ನಿವೇಶನ ಗುರುತಿಸಲಾಗಿದೆ. ಆದರೆ ಸರ್ಕಾರದಿಂದ ಅನುದಾನ ಬಾರದೇ ಇರುವುದರಿಂದ ಸ್ಥಳಾಂತರ ಕಾರ್ಯ ಪೂರ್ಣವಾಗಿಲ್ಲ ಆದ್ದರಿಂದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಕೂಡಲೇ ಚೆಂಗಡಿ ಗ್ರಾಮವನ್ನು ಸ್ಥಳಾಂತರ ಮಾಡಬೇಕು ಇಲ್ಲದಿದ್ದರೆ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…