ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ, ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯ
ದಾ.ರಾ.ಮಹೇಶ್
ವೀರನಹೊಸಹಳ್ಳಿ: ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಪಶುಸಂಜೀವಿನಿ ಆಂಬ್ಯುಲೆನ್ಸ್ ಸೇವೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.
ಸುಸಜ್ಜಿತ ಆಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ೧೯೬೨ ಸಹಾಯವಾಣಿ ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿದೆ. ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.
ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ಆಂಬ್ಯುಲೆನ್ಸ್ ಸೇವೆಯನ್ನು ಜಾರಿಗೆ ತರಲಾಗಿತ್ತು. ಈ ಸೇವೆಗೆ ಉತ್ತಮ ಪ್ರತಿಕ್ರಿೆುಂ ಸಿಗುತ್ತಿದೆ.
ಈವರೆಗೆ ಎಷ್ಟು ಜಾನುವಾರುಗಳಿಗೆ ಚಿಕಿತ್ಸೆ?: ಜಾನುವಾರುಗಳ ಚಿಕಿತ್ಸೆಗಾಗಿ ವಿಶೇಷ ಆಂಬ್ಯುಲೆನ್ಸ್ ಸೇವೆಯನ್ನು ಸರ್ಕಾರ ಕಳೆದ ವರ್ಷ ಆಗಸ್ಟ್‌ನಲ್ಲಿ ಜಾರಿಗೆ ತಂದಿತ್ತು. ಈ ಆಂಬ್ಯುಲೆನ್ಸ್‌ಗಳು ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನಗಳಾಗಿವೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುವ ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.
ಆಂಬ್ಯುಲೆನ್ಸ್ ವಿಶೇಷತೆ ಏನು?: ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ಶಸ್ತ್ರ ಚಿಕಿತ್ಸಾ ಘಟಕವಿದೆ. ವಾಹನದಲ್ಲಿ ಪ್ರೋಂಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ. ೨೫೦ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹೊಂದಿದ್ದು, ೨೦೦ ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಾಶ್ ಬೇಸಿನ್, ೧೦೦ ವೋಲ್ಟ್ ಎಲ್‌ಇಡಿ ಲೈಟ್, ಆಕ್ಸಿಜನ್ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ವ್ಯವಸ್ಥೆ, ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‌ಗಳ ಪೆಟ್ಟಿಗೆಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಹೊಂದಿದೆ.
ಚಿಕಿತ್ಸೆ ಏನು?: ವಿಷಪ್ರಾಸನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವಿಕೆ, ಅಪಘಾತ, ಮೂಳೆಮುರಿತ, ಆಂಥ್ರಾಕ್ಸ್, ಚಪ್ಪೆರೋಗ, ಗಳಲೆ ರೋಗ, ಹಾಲುಜ್ವರ, ಕೆಚ್ಚಲು ಬಾವಿಗೆ ಚಿಕಿತ್ಸೆ ನೀಡಲಾಗುತ್ತದೆ. ವಿವಿಧ ರೋಗೋದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ. ರೈತರ ಮನೆ ಬಾಗಿಲಿಗೆ ತೆರಳುವ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಲಿದ್ದಾರೆ.
ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಪಶುವೈದ್ಯಕೀಯ ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಇದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಾರಿಯಾದ ಈ ಸೇವೆಗೆ ಉತ್ತಮ ಜನಸ್ಪಂದನೆ ಸಿಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಈ ಸುಸಜ್ಜಿತ ಆಂಬ್ಯುಲೆನ್ಸ್ ರೈತರಿಗೆ ಅನುಕೂಲಕರವಾಗಿದೆ. ಆಂಬ್ಯುಲೆನ್ಸ್‌ಗಳು ಒಟ್ಟು ೩೦,೨೫೫ ಕಿ.ಮೀ. ಕ್ರಮಿಸಿದ್ದು, ಮೇ ತಿಂಗಳಲ್ಲಿ ೪೨ ಜಾನುವಾರುಗಳಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ. ೭೫ ಗ್ರಾಮಗಳಿಗೆ ತೆರಳಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಒಂದೊಂದು ಆಂಬ್ಯುಲೆನ್ಸ್ ನೀಡಿದ್ದು, ಪ್ರತಿ ತಾಲ್ಲೂಕಿಗೆ ೨ರಿಂದ ೩ ಆಂಬ್ಯುಲೆನ್ಸ್ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯದಲ್ಲೇ ಅನುಮೋದನೆ ಸಿಗಲಿದೆ.
–ಷಡಕ್ಷರಿ ಸ್ವಾಮಿ, ಪಶುಸಂಗೋಪನೆ ಇಲಾಖೆ ಜಿಲ್ಲಾ ನಿರ್ದೇಶಕ
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…