ಜಿಲ್ಲೆಗಳು

ಪಶುಸಂಜೀವಿನಿ ಆಂಬ್ಯುಲೆನ್ಸ್ ಸೇವೆಗೆ ಉತ್ತಮ ಸ್ಪಂದನೆ

ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ, ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯ

ದಾ.ರಾ.ಮಹೇಶ್

ವೀರನಹೊಸಹಳ್ಳಿ: ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಪಶುಸಂಜೀವಿನಿ ಆಂಬ್ಯುಲೆನ್ಸ್ ಸೇವೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.

ಸುಸಜ್ಜಿತ ಆಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ೧೯೬೨ ಸಹಾಯವಾಣಿ ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿದೆ. ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.
ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ಆಂಬ್ಯುಲೆನ್ಸ್ ಸೇವೆಯನ್ನು ಜಾರಿಗೆ ತರಲಾಗಿತ್ತು. ಈ ಸೇವೆಗೆ ಉತ್ತಮ ಪ್ರತಿಕ್ರಿೆುಂ ಸಿಗುತ್ತಿದೆ.
ಈವರೆಗೆ ಎಷ್ಟು ಜಾನುವಾರುಗಳಿಗೆ ಚಿಕಿತ್ಸೆ?: ಜಾನುವಾರುಗಳ ಚಿಕಿತ್ಸೆಗಾಗಿ ವಿಶೇಷ ಆಂಬ್ಯುಲೆನ್ಸ್ ಸೇವೆಯನ್ನು ಸರ್ಕಾರ ಕಳೆದ ವರ್ಷ ಆಗಸ್ಟ್‌ನಲ್ಲಿ ಜಾರಿಗೆ ತಂದಿತ್ತು. ಈ ಆಂಬ್ಯುಲೆನ್ಸ್‌ಗಳು ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನಗಳಾಗಿವೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸುವ ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗೆ ಲಿಂಕ್ ಮಾಡಲಾಗಿದೆ.

ಆಂಬ್ಯುಲೆನ್ಸ್ ವಿಶೇಷತೆ ಏನು?: ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಿವೆ. ಶಸ್ತ್ರ ಚಿಕಿತ್ಸಾ ಘಟಕವಿದೆ. ವಾಹನದಲ್ಲಿ ಪ್ರೋಂಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ. ೨೫೦ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹೊಂದಿದ್ದು, ೨೦೦ ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಾಶ್ ಬೇಸಿನ್, ೧೦೦ ವೋಲ್ಟ್ ಎಲ್‌ಇಡಿ ಲೈಟ್, ಆಕ್ಸಿಜನ್ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ವ್ಯವಸ್ಥೆ, ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‌ಗಳ ಪೆಟ್ಟಿಗೆಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಹೊಂದಿದೆ.

ಚಿಕಿತ್ಸೆ ಏನು?: ವಿಷಪ್ರಾಸನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವಿಕೆ, ಅಪಘಾತ, ಮೂಳೆಮುರಿತ, ಆಂಥ್ರಾಕ್ಸ್, ಚಪ್ಪೆರೋಗ, ಗಳಲೆ ರೋಗ, ಹಾಲುಜ್ವರ, ಕೆಚ್ಚಲು ಬಾವಿಗೆ ಚಿಕಿತ್ಸೆ ನೀಡಲಾಗುತ್ತದೆ. ವಿವಿಧ ರೋಗೋದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ. ರೈತರ ಮನೆ ಬಾಗಿಲಿಗೆ ತೆರಳುವ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಲಿದ್ದಾರೆ.


ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಪಶುವೈದ್ಯಕೀಯ ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಇದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜಾರಿಯಾದ ಈ ಸೇವೆಗೆ ಉತ್ತಮ ಜನಸ್ಪಂದನೆ ಸಿಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಈ ಸುಸಜ್ಜಿತ ಆಂಬ್ಯುಲೆನ್ಸ್ ರೈತರಿಗೆ ಅನುಕೂಲಕರವಾಗಿದೆ. ಆಂಬ್ಯುಲೆನ್ಸ್‌ಗಳು ಒಟ್ಟು ೩೦,೨೫೫ ಕಿ.ಮೀ. ಕ್ರಮಿಸಿದ್ದು, ಮೇ ತಿಂಗಳಲ್ಲಿ ೪೨ ಜಾನುವಾರುಗಳಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ. ೭೫ ಗ್ರಾಮಗಳಿಗೆ ತೆರಳಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಒಂದೊಂದು ಆಂಬ್ಯುಲೆನ್ಸ್ ನೀಡಿದ್ದು, ಪ್ರತಿ ತಾಲ್ಲೂಕಿಗೆ ೨ರಿಂದ ೩ ಆಂಬ್ಯುಲೆನ್ಸ್ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯದಲ್ಲೇ ಅನುಮೋದನೆ ಸಿಗಲಿದೆ.

ಷಡಕ್ಷರಿ ಸ್ವಾಮಿ, ಪಶುಸಂಗೋಪನೆ ಇಲಾಖೆ ಜಿಲ್ಲಾ ನಿರ್ದೇಶಕ

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago