ದೀಪಾವಳಿ ಸಂಭ್ರಮ ಮತ್ತೆ ಬಂದಿದೆ. ಜನರು ಹಬ್ಬದ ಆಚರಣೆಗೆ ಸಜ್ಜಾಗಿದ್ದಾರೆ. ಆದರೆ ಹಬ್ಬದ ಪ್ರಮುಖ ಭಾಗವಾಗಿದ್ದ ಪಟಾಕಿ ಅಬ್ಬರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. ಸುಪ್ರೀಕೋರ್ಟ್ ನಿರ್ದೇಶನ, ಸರಕಾರದ ನಿಯಂತ್ರಣ ಕ್ರಮಗಳು ಮತ್ತು ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯ ನಡುವೆ ಪಟಾಕಿ ವ್ಯಾಪಾರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಸಾಗಿದೆ.
ಈ ವರ್ಷದಿಂದ ರಾಜ್ಯದಲ್ಲಿ ಹಸಿರು ಪಟಾಕಿಯನ್ನಷ್ಟೇ ಮಾರಲು ಅವಕಾಶ ನೀಡಲಾಗಿದೆ. ಜತೆಗೆ ಎಲ್ಲ ಪಟಾಕಿ ಲೇಬಲ್ ಗಳ ಮೇಲೆ ಕ್ಯೂ. ಆರ್. ಕೋಡ್ ಕಡ್ಡಾಯಗೊಳಿಸಲಾಗಿದೆ. ಈ ಎಲ್ಲ ನಿರ್ಬಂಧಗಳ ನಡುವೆಯೂ ಮೈಸೂರಿನ ಜೆ.ಕೆ. ಮೈದಾನದಲ್ಲಿ ಎಂದಿನಂತೆ ಮೈಸೂರಿನ ಪಟಾಕಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಳಿಗೆಗಳನ್ನು ಹಾಕಲಾಗಿದೆ. ಆದರೆ ದೀಪಾವಳಿಗೆ ಮುನ್ನವೇ ನೂರಾರು ಸಂಖ್ಯೆಯಲ್ಲಿ ಧಾಂಗುಡಿ ಇಡುತ್ತಿದ್ದ ಗ್ರಾಹಕರ ಅಬ್ಬರ ಈ ಬಾರಿ ಕಾಣಿಸುತ್ತಿಲ್ಲ. ವ್ಯಾಪಾರಸ್ಥರ ಮೊಗದಲ್ಲೂ ಈ ಬಗ್ಗೆ ಚಿಂತೆಯ ಗೆರೆಗಳು ಮೂಡಿವೆ.
ಈ ಬಾರಿ ಸರಕಾರದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನಷ್ಟೇ ಮಾರುತ್ತಿದ್ದೇವೆ. ಇದರಿಂದ ಪರಿಸರ ಮಾಲಿನ್ಯದ ಭಯವಿಲ್ಲ. ಈ ಬಾರಿ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಿರುವುದರಿಂದ ಗ್ರಾಹಕರು ಕೋಡ್ ಸ್ಕ್ಯಾನ್ ಮಾಡಿ ಅದು ಎಲ್ಲಿ ಉತ್ಪಾದನೆಯಾಗಿದೆ ಎನ್ನುವುದನ್ನೂ ತಿಳಿದುಕೊಳ್ಳಬಹುದು. ನಕಲಿ ಪಟಾಕಿಗಳ ಪತ್ತೆಗೆ ಇದು ಸಹಕಾರಿಯಾಗಿದೆ. ಗ್ರಾಹಕರು ಧೈರ್ಯವಾಗಿ ಪಟಾಕಿ ಖರೀದಿಸಬಹುದು ಎಂದು ಆಂದೋಲನ ಡಿಜಿಟಲ್ ಜತೆ ಮಾತನಾಡಿದ ಪಟಾಕಿ ವರ್ತಕರ ಸಂಘದ ಉಪಾಧ್ಯಕ್ಷ ಶರತ್ ಸತೀಶ್ ಅವರು ತಿಳಿಸಿದ್ದಾರೆ.
ಮಳೆ ಇನ್ನೂ ಮುಂದುವರಿದಿದೆ. ಈ ಕಾರಣದಿಂದ ಜನರು ಪಟಾಕಿ ಖರೀದಿಗೆ ಆಸಕ್ತಿ ತೋರಿಸಿಲ್ಲ. ಮಳೆ ಬಿಡುವು ನೀಡಿದರೆ ಇಂದು ಸಂಜೆಯಿಂದಲೇ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದೆ ಎಂದು ಪಟಾಕಿ ವರ್ತಕರ ಸಂಘದ ಅಧ್ಯಕ್ಷ ಮಂಜುನಾಥ್ ಆಂದೋಲನಕ್ಕೆ ತಿಳಿಸಿದರು.
ವರ್ಷಕ್ಕೊಮ್ಮೆ ಜೆ.ಕೆ.ಮೈದಾನದಲ್ಲಿ ಪಟಾಕಿ ಮಳಿಗೆ ಹಾಕಿ ಅದರಿಂದ ಬಂದ ಆದಾಯದಿಂದಲೇ ಕುಟುಂಬ ನಿರ್ವಹಣೆ ಮಾಡುವ ಹಲವು ಕುಟುಂಬಗಳಿವೆ. ಇವರೆಲ್ಲರೂ ವ್ಯಾಪಾರ ಗರಿದೆದರುವ ನಿರೀಕ್ಷೆಯಲ್ಲಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…