ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಬರುತ್ತಿಲ್ಲ, ಮತ ಕೇಳಲು ಬರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.
ಶ್ರೀರಂಗಪಟಣ ತಾಲೂಕಿನ ಕೆಆರ್‌ಎಸ್ ನಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡಕ್ಕೆ ಅಮಿತಾ ಬರುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಅವರಿಗೆ ಜನನ ಸಮಸ್ಯೆಗಳಿಗೆ ಪರಿಹಾರ ಸೂಚಿಸುವುದಕ್ಕಿಂತ ಮತಗೊಳಿಸುವುದೇ ಮುಖ್ಯ. ಅದಕ್ಕಾಗಿ ಬರುತ್ತಿದ್ದಾರೆ. ಈಗಾಗಲೇ ಮಂತ್ರಿಗಳ ದಂಡೇ ರಾಜ್ಯಕ್ಕೆ ಬರುತ್ತಿದೆ.ಮೋದಿ ಕೂಡ ಬರುತ್ತಾರೆ. ಅದರಿಂದ ನಮಗೇನು ತೊಂದರೆ ಆಗದು ಎಂದು ತಿಳಿಸಿದರು.
*ಜನತೆ ತೀರ್ಮಾನಿಸುತ್ತಾರೆ*
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಡಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಶಾಸಕರಾದ ಪಕ್ಷದ ನಾಯಕನಾಗಿ ಅವರು ಜೆಡಿಎಸ್ ಮತ್ತು ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳದೆ, ಇನ್ನೇನು ನಮ್ಮ ಜೆಡಿಎಸ್ ಗೆ ಮತ ಹಾಕಲಿ ಎಂದು ಹೇಳಲು ಸಾಧ್ಯವೇ? ಇಂದು ಬಹಳ ಜನರಿಗೆ ಸಿಎಂ ಆಗಲು ಆಸೆ ಇದೆ. ಆದರೆ ಅಂತಿಮವಾಗಿ ದೇವರು ಮತ್ತು ಜನತೆಯ ಆಶೀರ್ವಾದ ಯಾರ ಪರವಾಗಿರುತ್ತೋ ಅವರು ಸಿಎಂ ಆಗ್ತಾರೆ ಎಂದರು.
*7ಕ್ಕೆ 7 ಸ್ಥಾನ*
ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆಗೆ ಅತ್ಯುದ್ಬುತವಾದ ಬೆಂಬಲವನ್ನು ಈ ಭಾಗದ ಜನತೆ ತೋರಿಸಿದ್ದಾರೆ. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತೆಯ ಆಶೀರ್ವಾದ ಜೆಡಿಎಸ್ ಅಭ್ಯರ್ಥಿಗಳ ಪರವಾಗಿದ್ದು, ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಏಳು ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಆತ್ಮವಿಶ್ವಾಸ ಮೂಡಿದೆ ಎಂದರು.
ಕೊರೋನಾ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂಜಾಗ್ರತ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಲಿ. ಜನತೆ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರವೇ ಮುಂದೆ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಸಿ. ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ,ಜಿಲ್ಲಾಧ್ಯಕ್ಷ ಡಿ. ರಮೇಶ್,ಮನ್ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…
ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು…
ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ…
ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ…