Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಕೃಷ್ಣ ಮೃಗದ ಚರ್ಮ ಮಾರಾಟಕ್ಕೆ ಯತ್ನ; ಬಂಧನ

ಮಡಿಕೇರಿ: ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬವರು ಬಂಧಿತ ಆರೋಪಿಗಳು.

ನ.೩೦ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ, ಆರೋಪಿಗಳಿಂದ ೧ ಕೃಷ್ಣ ಮೃಗದ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯ ಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರ ದಳದ ಪಿಎಸ್‌ಐ ಸಿಯು.ಸವಿ, ಸಿಬ್ಬಂದಿಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಹಾಗೂ ಮಂಜುನಾಥ ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!