Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ನದಿಯಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆ

ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್‌ಐಗಳಾದ ಬಸವರಾಜು, ಮಹಾಲಿಂಗಯ್ಯ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲೇ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಪೊಲೀಸರೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಎಎಸ್‌ಐ ತಿಮ್ಮನಾಯಕ, ಸಿಬ್ಬಂದಿಗಳು ಸಾರ್ವಜನಿಕರು ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!