ಜಿಲ್ಲೆಗಳು

ಆಂದೋಲನ ವರದಿಗೆ ಎಚ್ಚೆತ್ತು ಬೃಹತ್ ಗಾತ್ರದ ಮರ ತೆರೆವುಗೊಳಿಸಿದ ಅರಣ್ಯ ಅಧಿಕಾರಿಗಳು

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ .

ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು.

ಈ ರಸ್ತೆಯಲ್ಲಿ ಪ್ರತಿಷ್ಠಿತ ಕ್ರಿಸ್ತರಾಜ ವಿದ್ಯಾಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್‌ ,ಮಣಪ್ಪುರಂ ಫೈನಾನ್ಸ್ ಕೋಟಕ್ ಮಹೀಂದ್ರ ಬ್ಯಾಂಕ್ ಸೇರಿದಂತೆ ಹತ್ತಾರು ಕಚೇರಿಗಳು ಹಾಗೂ ಖಾಸಗಿ ಆಸ್ಪತ್ರೆ ಇದ್ದ ಹಿನ್ನೆಲೆ ಸಾವಿರಾರು ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಹಕರು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದರು.

ಈ ಬಗ್ಗೆ “ಆಂದೋಲನ ಪತ್ರಿಕೆಯಲ್ಲಿ ಮರ ತೆರವುಗೊಳಿಸುವಂತೆ ಆಗ್ರಹ” ಎಂಬ ಶೀರ್ಷಿಕೆಯಡಿ ಅಕ್ಟೋಬರ್ 18 ರಂದು ವರದಿ ಪ್ರಕಟವಾಗಿತ್ತು ವರದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ್ದಾರೆ.

ಆಂದೋಲನ ಟಿವಿ ಗೆ ಮೆಚ್ಚುಗೆ : ಬಂಡಳ್ಳಿ ರಸ್ತೆಯಲ್ಲಿ ಸತತ ಬೀಳುತ್ತಿರುವ ಮಳೆಗೆ ವಾಲಿಕೊಂಡಿರುವ ಮರ ತೆರವುಗೊಳಿಸುವಂತೆ ಅ 17ರಂದು ಆಂದೋಲನ ಟಿವಿ ಯಲ್ಲಿ ವರದಿ ಪ್ರಸಾರವಾಗಿತ್ತು.ವರದಿ ಪ್ರಕಟವಾದ ಮರುದಿನವೇ ಮರ ತೆರವುಗೊಳಿಸುತ್ತಿರುವುದರಿಂದ ಸಾರ್ವಜನಿಕರು ಆಂದೋಲನ ಟಿವಿ ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

andolanait

Recent Posts

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

4 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

11 mins ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

13 mins ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

24 mins ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

27 mins ago

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌…

1 hour ago