ಮೈಸೂರು: ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಎಸ್. ಚಿಕ್ಕಮಾದು ಅವರು ಜಾ.ದಳ ಸೇರ್ಪಡೆಯಾಗಲಿದ್ದಾರೆ. ಗುರುವಾರ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾ.ದಳ ಸೇರುವ ಮೂಲಕ ಹುಣಸೂರು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್ ಗೌಡ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿರುವುದು ಅಚ್ಚರಿ ಮೂಡಿಸಿದೆ. ಬಂಗಾರಪ್ಪ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಣಸೂರು ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಚುನಾಯಿತರಾಗಿದ್ದ ಚಿಕ್ಕಮಾದು ಅವರು ನಂತರದ ದಿನಗಳಲ್ಲಿ ಜಾ.ದಳದಲ್ಲಿ ರಾಜಕೀಯ ಭವಿಷ್ಯ ಕಂಡುಕೊಂಡು ಒಂದು ಅವಧಿಗೆ ವಿಧಾನಪರಿಷತ್ ಸದಸ್ಯರಾಗಿದ್ದರು ನಂತರ ತಮ್ಮ ಕಾರ್ಯಕ್ಷೇತ್ರವನ್ನು ಹುಣಸೂರು ನಿಂದ ಎಸ್.ಟಿ.ಮೀಸಲು ಕ್ಷೇತ್ರ ಎಚ್.ಡಿ.ಕೋಟೆಗೆ ಬದಲಾಯಿಸಿಕೊಂಡು ಶಾಸಕರಾಗಿ ಆಯ್ಕೆಯಾಗಿದ್ದರು. ಎರಡನೇ ಅವಧಿಯಲ್ಲಿ ಅನಾರೋಗ್ಯ ದಿಂದ ನಿಧನರಾದ ನಂತರ ಅವರ ಪುತ್ರ ಅನಿಲ್ ಚಿಕ್ಕಮಾದು ಕಾಂಗ್ರೆಸ್ ಸೇರಿ ಎಚ್.ಡಿಕೋಟೆ ಕ್ಷೇತ್ರದ ಶಾಸಕರಾಗಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…