ಜಿಲ್ಲೆಗಳು

ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಬ್ಬ ವಿದ್ಯಾರ್ಥಿನಿ ಬಲಿ

ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಉಪಟಳ ಮುಂದುವರಿದಿದ್ದು ತಿ.ನರಸೀಪುರ ತಾಲ್ಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ.  

20 ವರ್ಷದ ಮೇಘನ ಚಿರತೆ ದಾಳಿಗೊಳಗಾದ ಯುವತಿ. ತಿ. ನರಸೀಪುರ ಸರಕಾರಿ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಮೇಘನಾ ಇಳಿಸಂಜೆಯ ವೇಳೆಗೆ ಮನೆ ಹಿಂಬದಿ ಇದ್ದ ಶೌಚಾಲಯಕ್ಕೆ ಹೋದಾಗ ಚಿರತೆ ದಾಳಿ ಮಾಡಿದೆ.

 

ಮೇಘನಾಳ ಮೇಲೆ ಹಠಾತ್‌ ದಾಳಿ ನಡೆಸಿದ ಚಿರತೆ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಕಚ್ಚಿದೆ. ಆಕೆ ಚೀರಿಕೊಂಡಾಗ ಮನೆಯವರು ರಕ್ಷಣೆಗೆ ಧಾವಿಸಿದ್ದು. ಕೂಗಾಟ ಕೇಳಿ ಚಿರತೆ ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಗ್ರಾಮಸ್ಥರ ಧರಣಿ

ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದ್ದು ಈ ಬಗ್ಗೆ ಜನರು ಪ್ರತಿಭಟನೆಗಿಳಿದಿರುವಾಗಲೇ ಈ ಘಟನೆ ಸಂಭವಿಸಿದೆ. ಮೇಘನಾಳ ಶವವನ್ನು ಪಟ್ಟಣದ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು ಉಸ್ತುವಾರಿ ಸಚಿವರು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಭೇಟಿಗೆ ಆಗ್ರಹಿಸಿ ಗ್ರಾಮಸ್ಥರು ಧರಣಿ ಕುಳಿತಿದ್ದಾರೆ. ಸಂತ್ರಸ್ತರ ಜತೆ ಶಾಸಕ ಟಿ. ಅಶ್ವಿನ್‌ ಕುಮಾರ್‌ ಕೂಡ ಧರಣಿ ಕುಳಿತಿದ್ದಾರೆ.

ಎರಡನೇ ಬಲಿ

ಅಕ್ಟೋಬರ್‌ 31ರಂದು ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನ ಬಿಕಾಂ ವಿದ್ಯಾರ್ಥಿ ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಸ್ನೇಹಿತರ ಜತೆ ಕಾರ್ತಿಕ ಜಾತ್ರೆಗೆಂದು ಹೊರಟ ಮಂಜುನಾಥ್‌ (19) ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆಯ ಬಳಿಕ ಅರಣ್ಯ ಇಲಾಖೆ ಚಿರತೆ ಹಾವಳಿ ಹೆಚ್ಚಿರುವ ಗ್ರಾಮಗಳಲ್ಲಿ ಬೋನು ಇರಿಸಿ ಚಿರತೆಗಳನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿತ್ತು. ಆದರೆ ಚಿರತೆಗಳು ಮತ್ತೆ ಮತ್ತೆ ಕಾಣಿಸಿಕೊಂಡರೂ ಬಲೆಗೆ ಬಿದ್ದಿರಲಿಲ್ಲ.

20ಕ್ಕೂ ಹೆಚ್ಚು ಚಿರತೆ ಸೆರೆ

ಮೈಸೂರು ಭಾಗದಲ್ಲಿ ಕಳೆದ ಆರು ತಿಂಗಳಲ್ಲಿ 20 ಕ್ಕೂ ಹೆಚ್ಚು ಚಿರತೆಗಳು ಸೆರೆಯಾಗಿರುವುದು ಚಿರತೆಗಳ ಹಾವಳಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

andolana

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

14 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

15 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

15 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

16 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

16 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

19 hours ago