ಜಿಲ್ಲೆಗಳು

ಕುಕ್ಕರಹಳ್ಳಿ ಕೆರೆ ಪರಿಶೀಲನೆಗೆ ಮತ್ತೊಂದು ಇಂಜಿನಿಯರ್ ತಂಡ

ಮೈಸೂರು: ಕುಕ್ಕರಹಳ್ಳಿ ಕೆರೆ ಏರಿಯಲ್ಲಿನ ನೀರು ಸೋರಿಕೆಯಿಂದ ಯಾವುದೇ ಅಪಾಯವಿಲ್ಲ. ಆದರೆ, ಕೆರೆಯ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ವ್ಯವಸ್ಥಿತವಾಗಿ ರಾಕ್‌ಟೋಗಳನ್ನು ಮತ್ತು ಹೆಡ್ ರೆಗ್ಯುಲೇಟರ್ ಅಳವಡಿಸಬೇಕು ಎಂಬ ಎರಡು ಪ್ರಮುಖ ಅಂಶಗಳನ್ನು ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್ ತಂಡ ಇಂಜಿನಿಯರ್‌ಗಳು ತಿಳಿಸಿದ್ದಾರೆ.

ನಿಗಮದ ಡಿಸೈನ್ ವಿಂಗ್‌ನ ತಾಂತ್ರಿಕ ಸಲಹೆಗಾರ ಎಚ್.ಕೆ.ಸಂಪತ್ ಕುಮಾರ್ ನೇತೃತ್ವದ ತಂಡ ಸೋಮವಾರ ಕುಕ್ಕರಹಳ್ಳಿ ಕೆರೆಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿದೆ. ಶನಿವಾರವಷ್ಟೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ ಇಂಜಿನಿಯರ್‌ಗಳ ತಂಡ ಪರಿಶೀಲನೆ ನಡೆಸಿ, ಮಣ್ಣಿನ ಪರೀಕ್ಷೆ ಮಾಡಿ ವರದಿ ನೀಡುವುದಾಗಿ ಹೇಳಿದ್ದು, ಕಾವೇರಿ ನೀರಾವರಿ ನಿಗಮದ ಇಂಜಿನಿಯರ್‌ಗಳ ತಂಡ ನೀರು ಜಿನುಗುವ ಜಾಗದಲ್ಲಿ ಮತ್ತು ಬಂಡ್‌ಗಳಲ್ಲಿ ರಾಕ್‌ಟೋಗಳನ್ನು ಮಾಡುವಂತೆ ತಿಳಿಸಿದೆ.

ರಾಕ್‌ಟೋ ಎಂದರೇನು?: ಕೆರೆಯ ಏರಿಯಲ್ಲಿ ಎಲ್ಲಿ ನೀರು ಜಿನುಗುತ್ತದೆ. ಎಲ್ಲ ಬಂಡ್‌ಗಳಲ್ಲಿ ರಾಕ್‌ಟೋಗಳನ್ನು ನಿರ್ಮಿಸಲು ತಂಡ ಸಲಹೆ ನೀಡಿದೆ. ಜಿನುಗುವ ನೀರು ಬಸಿದು ಹೋಗಲು ಅನುಕೂಲವಾಗುವಂತೆ ಮಾಡುವ ಕಲ್ಲಿನ ಕಟ್ಟಡವೇ ರಾಕ್‌ಟೋ. ಇದನ್ನು ಕಲ್ಲಿನಲ್ಲಿಯೇ ಮಾಡಬೇಕು. ಕಾಂಕ್ರೀಟ್ ಬಳಸುವಂತಿಲ್ಲ.

ಹೆಡ್ ರೆಗ್ಯುಲೇಟರ್ ಅಳವಡಿಕೆ : ಮಳೆಯು ಬಂದಾಗ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಹೋಗುವಂತೆ ಮಾಡಲು ಈಗಿರುವ ಕೊಂಟ(ಸ್ಲೂಸೈ ಗೇಟ್) ನ ಬದಲಾಗಿ ಹೆಡ್ ರೆಗ್ಯುಲೇಟರ್ ಅನ್ನು ಅಳವಡಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಹೋಗಲು ಅನುಕೂಲವಾಗುತ್ತದೆ. ಆದರೆ, ಹೀಗೆ ನೀರನ್ನು ಹೊರ ಬಿಟ್ಟಾಗ, ನೀರಿನಿಂದ ದೋಬಿ ಘಾಟ್‌ಗೆ ಯಾವುದೇ ತೊಂದರೆಯಾಗದಂತೆ ನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ರಾಕ್‌ಟೋ ಮತ್ತು ಹೆಡ್ ರೆಗ್ಯುಲೇಟರ್ ಅನ್ನು ಹೇಗೆ ಮಾಡಬೇಕು ಎಂಬ ಕುರಿತು ವಾರದೊಳಗೆ ವರದಿ ನೀಡುವುದಾಗಿ ತಿಳಿಸಿದೆ.

ಕಾವೇರಿ ನೀರಾವರಿ ನಿಗಮದ ಡಿಸೈನ್ ವಿಂಗ್‌ನ ಎಇಇಗಳಾದ ಎಂ.ಎನ್.ಚಂದ್ರೆಶೇಖರ್, ಗೋವರ್ಧನ್, ಸೋಮಶೇಖರ್, ಮೈಸೂರು ವಿವಿಯ ಇಂಜಿನಿಯರ್‌ಗಳಾದ ಇಇ ಪ್ರತಾಪ್, ಎಇಇ ಶಿವಲಿಂಗಪ್ರಸಾದ್ ಇದ್ದರು.

 

 

 

 

 

 

 

 

 

 

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago