ಮಡಿಕೇರಿ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಾಗಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತಪಟ್ಟವರು. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ.
ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿದಾಗ ಆಘಾತಕ್ಕೊಳಗಾದ ಅಬ್ರುದ್ದೀನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತ ಪಟ್ಟಿದ್ದಾರೆ.ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




