ಮೈಸೂರು : ಶಿಕ್ಷಣದ ಉದ್ದೇಶವು ಮಾಹಿತಿಯನ್ನು ನೀಡುವುದು ಮಾತ್ರವಲ್ಲದೆ ವ್ಯಕ್ತಿಯಲ್ಲಿ ಆಧ್ಯಾತ್ಮಿಕತೆಯನ್ನು ಬೆಳೆಸುವುದು, ಬುದ್ಧಿವಂತಿಕೆಯಿಲ್ಲದ ಯಾವುದೇ ಶಿಕ್ಷಣವು ನಿಷ್ಪ್ರಯೋಜಕವಾಗಿದೆ ಎಂದು ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅವರು ಅಭಿಪ್ರಾಯಪಟ್ಟರು.

ನಗರದ ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿಂದು ನಡೆದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ನವೀನ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಔಷಧೀಯ ಶಿಕ್ಷಣ, ತರಬೇತಿ ಮತ್ತು ಸಂಶೋಧನೆಯಲ್ಲಿ ಜಾಗತಿಕ ಪ್ರವರ್ತಕರಾಗಿ 50 ವರ್ಷಗಳನ್ನು ಪೂರೈಸಿದ JSSAHER ಮತ್ತು JSS ಕಾಲೇಜ್ ಆಫ್ ಫಾರ್ಮಸಿ, ಮೈಸೂರಿನ ನಾಯಕತ್ವವನ್ನು ಅಭಿನಂದಿಸಿದರು. ಮುಂದುವರಿದು ಶಿಕ್ಷಣದ ಉದ್ದೇಶವು ಮಾಹಿತಿಯನ್ನು ನೀಡುವುದು ಮಾತ್ರವಲ್ಲದೆ ವ್ಯಕ್ತಿಯಲ್ಲಿ ಆಧ್ಯಾತ್ಮಿಕತೆಯನ್ನು ಬೆಳೆಸುವುದು. ಜೆಎಸ್‌ಎಸ್ ವಿದ್ಯಾರ್ಥಿಗಳು ಜೆಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಲ್ಲಿ ಎರಡನ್ನೂ ಪಡೆಯುವ ಅದೃಷ್ಟವಂತರು ಎಂದು ಅವರು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ವಹಿಸಿದ್ದರು. ಅಧ್ಯಕ್ಷತೆಯನ್ನು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ, ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸಮ ಉಪ ಕುಲಪತಿ ಡಾ.ಬಿ.ಸುರೇಶ್, ಉಪಕುಲಪತಿ ಡಾ. ಸುರೀಂದರ್ ಸಿಂಗ್ ಮತ್ತು ಇತರೆ ವಿಶ್ವವಿದ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವು ಆಮಂತ್ರಣ ಗೀತೆಯೊಂದಿಗೆ ಪ್ರಾರಂಭವಾಯಿತು ಮತ್ತು ಅತಿಥಿಗಳನ್ನು ಉಪಕುಲಪತಿ ಡಾ. ಸುರೀಂದರ್ ಸಿಂಗ್ ಸ್ವಾಗತಿಸಿದರು, ನಂತರ ಗಣ್ಯರು ದೀಪ ಬೆಳಗಿಸಿದರು.ಬಳಿಕ ಕಾಲೇಜಿನ ಅಭಿವೃದ್ಧಿಗೆ ಕಾರಣರಾದ ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಾಯಕತ್ವ ವಹಿಸಿದ ಪ್ರತಿಯೊಬ್ಬರನ್ನು ಅಭಿನಂದಿಸಲಾಯಿತು. ಮೈಸೂರಿನ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಎಂ.ಪ್ರಮೋದ್ ಕುಮಾರ್ ಅವರು ವಂದನಾರ್ಪಣೆ ನಡೆಸಿಕೊಟ್ಟರು.





