ಜಿಲ್ಲೆಗಳು

ಕೋಟೆ ಆಯ್ತು, ಈಗ ಸರಗೂರಿನಲ್ಲೂ ಅಪ್ಪಾಜಿ ಕ್ಯಾಂಟೀನ್!

ಜಾ.ದಳ ಮುಖಂಡ ಕೃಷ್ಣನಾಯಕ ಅವರಿಂದ ಆರಂಭ; ೧೬ರಂದು ಉದ್ಘಾಟನೆ

ಮಂಜು ಕೋಟೆ

ಹೆಚ್.ಡಿ.ಕೋಟೆ: ಜಾ ದಳ ಪಕ್ಷದ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆಯಂತೆ ಪಕ್ಷದ ಮುಖಂಡ ಕೃಷ್ಣನಾಯಕ ಅವರು ಕ್ಷೇತ್ರದಲ್ಲಿ ಮತ್ತೊಂದು ಬಡವರ ಪರವಾದ ಅಪ್ಪಾಜಿ ಕ್ಯಾಂಟೀನ್ ಅನ್ನು ಸರಗೂರಿನಲ್ಲಿ ಆರಂಭಿಸುತ್ತಿದ್ದಾರೆ.

ಕೋಟೆ ತಾಲ್ಲೂಕಿನ ಕೇಂದ್ರಸ್ಥಾನಮಾನ  ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದಲ್ಲಿ ೫ ತಿಂಗಳ ಹಿಂದೆ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಅಪ್ಪಾಜಿ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಗಿತ್ತು. ಇದರ ಮೂಲಕ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ಜನಸಾಮಅನ್ಯರಿಗೆ ೧೦ ರೂ. ಕಡಿಮೆ ದರದಲ್ಲಿ ಊಟ ತಿಂಡಿ ನೀಡಲಾಗುತ್ತಿದೆ. ಪ್ರತಿನಿತ್ಯ ಒಂದೂವರೆ ಸಾವಿರ ಜನರು ಇದರ ಸದುಪಯೋಗಪಡೆದುಕೊಳ್ಳುತ್ತಿದ್ದು, ಪಕ್ಷಕ್ಕೆ ಮತ್ತು ಕೃಷ್ಣ ನಾಯಕ ಅವರಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಮತ್ತೊಂದು ಕ್ಯಾಂಟೀನ್ ತೆರೆಯುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದರು. ಹೀಗಾಗಿ ಸರಗೂರು ಪಟ್ಟಣದಲ್ಲಿ ಇದೇ ತಿಂಗಳು ೧೬ರಂದು ಬುಧವಾರ ಜಾ.ದಳ ಪಕ್ಷದ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದೆ.
ರಾಜ್ಯದ ಯಾವುದೇ ತಾಲ್ಲೂಕು ಕೇಂದ್ರಗಳಲ್ಲಿ ಜಾ.ದಳದ ಸ್ವಂತ ಕಚೇರಿ ಮತ್ತು ೨ ಅಪ್ಪಾಜಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿರುವ ಉದಾಹರಣೆಯೇ ಇಲ್ಲ. ಇಂತಹ ಹೆಗ್ಗಳಿಕೆ ತಾಲ್ಲೂಕಿನ ಜಾ.ದಳಕ್ಕೆ ಸಂದಿದೆ.

ಕೃಷ್ಣ ನಾಯಕ ಈ ಭಾಗದ ಬಡ ಜನರಿಗೆ, ನೊಂದವರಿಗೆ, ರೈತರಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೋಟೆ ಪಟ್ಟಣದಲ್ಲಿ ಅಪ್ಪಾಜಿ ಕ್ಯಾಂಟೀನ್ ತೆರೆದು ಸಾವಿರಾರು ಜನರಿಗೆ ಅನುಕೂಲ ಮಾಡಿದ್ದಾರೆ. ಈಗ ಸರಗೂರು ಪಟ್ಟಣದಲ್ಲಿ ಮತ್ತೊಂದು ಕ್ಯಾಂಟೀನ್ ಪ್ರಾರಂಭಿಸಲಾಗುತ್ತಿದ್ದು, ಕಡಿಮೆ ದರದಲ್ಲಿ ದೊರೆಯುವ ಊಟ ತಿಂಡಿಯನ್ನು ಎಲ್ಲಾ ವರ್ಗದ ಬಡ ಜನರು ಪಡೆದುಕೊಳ್ಳಬೇಕಿದೆ.

ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ


ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನೊಂದವರಿಗೆ, ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಸೇವಾ ಕಾರ್ಯ ಮಾಡಲಾಗುತ್ತಿದೆ. ಅಪ್ಪಾಜಿ ಕ್ಯಾಂಟೀನ್ ಬಡವರ ಹಸಿವು ನೀಗಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ ಪಕ್ಷದ ಹಿತದೃಷ್ಟಿ ಮತ್ತು ಕುಮಾರಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಅವರ ನಿರ್ದೇಶನದಂತೆ ಎಲ್ಲಾ ಕಾರ್ಯಕ್ರಮಗಳನ್ನು  ನಡೆಸಲಾಗುತ್ತಿದೆ.
ಕೃಷ್ಣ ನಾಯಕ, ಜಾ.ದಳ ಮುಖಂಡ

andolanait

Recent Posts

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 min ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

6 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

12 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

9 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

10 hours ago